ಬಿಲಾಸ್ಪುರ: ರಾಷ್ಟ್ರೀಯ ಸೇವಾ ಯೋಜನೆ(ಎನ್ಎಸ್ಎಸ್) ಶಿಬಿರದಲ್ಲಿ ವಿದ್ಯಾರ್ಥಿಗಳಿಗೆ ನಮಾಜ್ ಮಾಡುವಂತೆ ಒತ್ತಾಯ ಮಾಡಿದ ಆರೋಪದಡಿ ಏಳು ಉಪನ್ಯಾಸಕರು ಮತ್ತು ವಿದ್ಯಾರ್ಥಿಯೊಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ.

ಛತ್ತೀಸಗಢದ ಶಿವತರೈ ಗ್ರಾಮದಲ್ಲಿ ಗುರು ಘಸಿದಾಸ್ ಕೇಂದ್ರೀಯ ವಿಶ್ವವಿದ್ಯಾಲಯದ ಎನ್ಎಸ್ಎಸ್ ಶಿಬಿರವು ಮಾರ್ಚ್ 26ರಿಂದ ಏಪ್ರಿಲ್ 1ರವರೆಗೆ ನಡೆದಿತ್ತು. ಶಿಬಿರದಲ್ಲಿ ಕೇವಲ ನಾಲ್ವರು ಮುಸ್ಲಿಮರಿದ್ದರು. ಆದರೆ, ಸುಮಾರು 159 ವಿದ್ಯಾರ್ಥಿಗಳಿಗೆ ನಮಾಜ್ ಮಾಡುವಂತೆ ಉಪನ್ಯಾಸಕರು ಒತ್ತಾಯಿಸಿದ್ದಾರೆ ಎಂದು ಆರೋಪಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಶಿಬಿರದಿಂದ ವಾಪಸಾದ ಬಳಿಕ ವಿದ್ಯಾರ್ಥಿಗಳು ಈ ಬಗ್ಗೆ ಪ್ರತಿಭಟನೆ ನಡೆಸಿದ್ದರು. ನಮಾಜ್ಗೆ ಒತ್ತಾಯಿಸಿದವರ ವಿರುದ್ಧ ಕ್ರಮಕೈಗೊಳ್ಳುವಂತೆ ಬಲಪಂಥೀಯ ಸಂಘಟನೆಗಳು ಆಗ್ರಹಿಸಿದ್ದವು.

ಪೊಲೀಸ್ ತಂಡವು ನೀಡಿದ ತನಿಖಾ ವರದಿಯ ಆಧಾರದಲ್ಲಿ ಗುರು ಘಸಿದಾಸ್ ಕೇಂದ್ರೀಯ ವಿಶ್ವವಿದ್ಯಾಲಯದ ಏಳು ಉಪನ್ಯಾಸಕರು ಮತ್ತು ಎನ್ಎಸ್ಎಸ್ ತಂಡದ ವಿದ್ಯಾರ್ಥಿ ನಾಯಕನ ವಿರುದ್ಧ ಶನಿವಾರ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

‘ಈವರೆಗೆ ಯಾರನ್ನೂ ಬಂಧಿಸಿಲ್ಲ. ಮುಂದಿನ ತನಿಖೆಯ ಆಧಾರದಲ್ಲಿ ಕ್ರಮ ಕೈಗೊಳ್ಳಲಾಗುವುದು’ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.