ಇಂಟರ್ನೆಟ್ ಸೇವೆ ಸ್ಥಗಿತ:
ವಿದ್ಯಾರ್ಥಿಗಳ ಪ್ರತಿಭಟನೆ ಹಿನ್ನೆಲೆಯಲ್ಲಿ ಮಣಿಪುರ ಸರ್ಕಾರ ರಾಜ್ಯದಲ್ಲಿ ಐದು ದಿನಗಳ ಕಾಲ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ಫೋಟೊಗಳು, ದ್ವೇಷ ಭಾಷಣದ ವಿಡಿಯೊಗಳು ಹರಿದಾಡುವುದನ್ನು ತಡೆಯುವ ಉದ್ದೇಶದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ರಾಜ್ಯ ಗೃಹ ಇಲಾಖೆ ಅಧಿಸೂಚನೆಯಲ್ಲಿ ತಿಳಿಸಿದೆ.