ಶ್ರೀನಗರ: ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ ಜಿಲ್ಲೆಯಲ್ಲಿ ಕಾಲೇಜು ಬಸ್ ಕಂದಕಕ್ಕೆ ಉರುಳಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದು, 21 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕುಪ್ವಾರಾ ಜಿಲ್ಲೆಯ ಸೊಗಮ್ ಹಳ್ಳಿಯ ಸರ್ಕಾರಿ ಪದವಿ ಕಾಲೇಜಿನ 27 ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕರೆದೊಯ್ಯುತ್ತಿದ್ದ ವೇಳೆ ಹಂದ್ವಾರದ ವೋಡ್ಪೋರಾ ಪ್ರದೇಶದ ಬಳಿ ಈ ಅವಘಡ ಸಂಭವಿಸಿದೆ ಎಂದು ಅವರು ಹೇಳಿದ್ದಾರೆ.

ಬಸ್ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದೆ. ಘಟನೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದು, 21 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳು ಹಂದ್ವಾರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆ ಕುರಿತು ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಘಟನೆ ಕುರಿತು ಸಂತಾಪ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ, ‘ಹಂದ್ವಾರದ ಬಳಿ ನಡೆದ ಭೀಕರ ಅಪಘಾತದಲ್ಲಿ ಸೋಗಮ್ನ ಜಿಡಿಸಿಯ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿರುವುದು ದುರಂತವಾಗಿದೆ. ಈ ದುಃಖದ ಸಮಯದಲ್ಲಿ ಅವರ ಕುಟುಂಬಗಳಿಗೆ ನನ್ನ ಸಂತಾಪ ಸೂಚಿಸುತ್ತೇನೆ. ಗಾಯಗೊಂಡವರ ಶೀಘ್ರ ಚೇತರಿಕೆಗಾಗಿ ಪ್ರಾರ್ಥಿಸುತ್ತೇನೆ’ ಎಂದು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.

ಮೃತರ ಕುಟುಂಬಗಳಿಗೆ ₹1 ಲಕ್ಷ, ಗಂಭೀರ ಗಾಯಗೊಂಡವರಿಗೆ ₹50,000 ಮತ್ತು ಇತರ ಗಾಯಾಳುಗಳಿಗೆ ₹25,000 ಪರಿಹಾರವನ್ನು ಸರ್ಕಾರ ಘೋಷಿಸಿದೆ ಎಂದು ಮುಖ್ಯಮಂತ್ರಿ ಸಲಹೆಗಾರ ನಾಸಿರ್ ಅಸ್ಲಾಂ ವಾನಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.