ಬುಧವಾರ, 23 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ನೀಟ್‌, ನೆಟ್‌ ಅಕ್ರಮ | ಭುಗಿಲೆದ್ದ ಆಕ್ರೋಶ; ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

ನಕಲಿ ಹಣ ಎಸೆದು ಪ್ರತಿಭಟನೆ
Published : 20 ಜೂನ್ 2024, 23:30 IST
Last Updated : 20 ಜೂನ್ 2024, 23:30 IST
ಫಾಲೋ ಮಾಡಿ
Comments
ಯುಜಿಸಿ–ನೆಟ್‌ ಪರೀಕ್ಷೆ ರದ್ದುಗೊಳಿಸಿದ್ದನ್ನು ವಿರೋಧಿಸಿ ವಿವಿಧ ವಿದ್ಯಾರ್ಥಿ ಸಂಘಟನೆಗಳ ಸದಸ್ಯರು ಲಖನೌ ವಿಶ್ವವಿದ್ಯಾಲಯದ ಬಳಿ ಗುರುವಾರ ಪ್ರತಿಭಟನೆ ನಡೆಸಿದರು –ಪಿಟಿಐ ಚಿತ್ರ
ಯುಜಿಸಿ–ನೆಟ್‌ ಪರೀಕ್ಷೆ ರದ್ದುಗೊಳಿಸಿದ್ದನ್ನು ವಿರೋಧಿಸಿ ವಿವಿಧ ವಿದ್ಯಾರ್ಥಿ ಸಂಘಟನೆಗಳ ಸದಸ್ಯರು ಲಖನೌ ವಿಶ್ವವಿದ್ಯಾಲಯದ ಬಳಿ ಗುರುವಾರ ಪ್ರತಿಭಟನೆ ನಡೆಸಿದರು –ಪಿಟಿಐ ಚಿತ್ರ
ಯುಜಿಸಿ–ನೆಟ್‌ ಪರೀಕ್ಷೆ ರದ್ದುಗೊಳಿಸಿದ್ದನ್ನು ವಿರೋಧಿಸಿ ವಿವಿಧ ವಿದ್ಯಾರ್ಥಿ ಸಂಘಟನೆಗಳ ಸದಸ್ಯರು ಲಖನೌ ವಿಶ್ವವಿದ್ಯಾಲಯದ ಬಳಿ ಗುರುವಾರ ಪ್ರತಿಭಟನೆ ನಡೆಸಿದಾಗ ಪೊಲೀಸರು ಅವರನ್ನು ವಶಕ್ಕೆ ಪಡೆದರು –ಪಿಟಿಐ ಚಿತ್ರ
ಯುಜಿಸಿ–ನೆಟ್‌ ಪರೀಕ್ಷೆ ರದ್ದುಗೊಳಿಸಿದ್ದನ್ನು ವಿರೋಧಿಸಿ ವಿವಿಧ ವಿದ್ಯಾರ್ಥಿ ಸಂಘಟನೆಗಳ ಸದಸ್ಯರು ಲಖನೌ ವಿಶ್ವವಿದ್ಯಾಲಯದ ಬಳಿ ಗುರುವಾರ ಪ್ರತಿಭಟನೆ ನಡೆಸಿದಾಗ ಪೊಲೀಸರು ಅವರನ್ನು ವಶಕ್ಕೆ ಪಡೆದರು –ಪಿಟಿಐ ಚಿತ್ರ
‘ಉಕ್ರೇನ್‌–ರಷ್ಯಾ ಯುದ್ಧವನ್ನು ನರೇಂದ್ರ ಮೋದಿ ನಿಲ್ಲಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ಪರೀಕ್ಷೆ ಪ್ರಶ್ನೆಪತ್ರಿಕೆಯ ಸೋರಿಕೆ ತಡೆಯಲು ಅವರಿಗೆ ಸಾಧ್ಯವಾಗುತ್ತಿಲ್ಲ. ಅವರ ಕಾಳಜಿ ತಮ್ಮ ಸರ್ಕಾರದ ಉಳಿವಿಗಾಗಿಯೇ ಹೊರತು ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಮೇಲಲ್ಲ.
-ರಾಹುಲ್‌ ಗಾಂಧಿ, ಕಾಂಗ್ರೆಸ್‌ ನಾಯಕ
ನಮ್ಮ ವಿದ್ಯಾರ್ಥಿಗಳ ಜೀವನ ಮತ್ತು ಭವಿಷ್ಯ ನಿತ್ಯ ನಾಶವಾಗುತ್ತಿದೆ. ಲೋಕಸಭಾ ಚುನಾವಣೆಯಿಂದ ಪ್ರಧಾನಿ ನರೇಂದ್ರ ಮೋದಿ  ಯಾವುದೇ ಪಾಠ ಕಲಿತಿಲ್ಲ. ಆದಷ್ಟು ಬೇಗ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ಅವರನ್ನು ವಜಾಗೊಳಿಸಬೇಕು
-ಸಾಕೇತ್‌ ಗೋಖಲೆ, ಸಂಸದ, ಟಿಎಂಸಿ 
ಮೊದಲಿಗೆ ಸಿಯುಇಟಿಯಲ್ಲಿ ವ್ಯತ್ಯಾಸಗಳಾದವು. ಬಳಿಕ ನೀಟ್‌ ಹಗರಣ ಈಗ ಯುಜಿಸಿ–ನೆಟ್‌ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ! ಬಿಜೆಪಿ ಸರ್ಕಾರವು ಶಿಕ್ಷಣ ವ್ಯವಸ್ಥೆಯನ್ನು ಪೂರ್ಣವಾಗಿ ಅಪಹಾಸ್ಯ ಮಾಡಿದೆ
-ಸಿಪಿಐ (ಎಂ)
ನೆಟ್‌ ಅನ್ನು ರದ್ದುಗೊಳಿಸಿದಂತೆಯೇ ನೀಟ್‌ ಅನ್ನೂ ರದ್ದುಗೊಳಿಸಿ. ಏಕೆಂದರೆ ಈ ಪರೀಕ್ಷೆಯಲ್ಲೂ ಅಕ್ರಮಗಳು ನಡೆದಿರುವುದಕ್ಕೆ ಸಾಕಷ್ಟು ಪುರಾವೆಗಳಿವೆ. ಇಲ್ಲಿಯೂ ಪರೀಕ್ಷಾ ಸಮಗ್ರತೆಗೆ ಧಕ್ಕೆಯಾಗಿದೆ
-ಮನೋಜ್‌ ಝಾ, ಸಂಸದ ಆರ್‌ಜೆಡಿ
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ಬಂಧಿತರಾಗಿರುವ ಪ್ರಮುಖ ಆರೋಪಿಯು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್‌ ಅವರ ಅಧಿಕಾರಿಗಳೊಂದಿಗೆ ಸಂಪರ್ಕ ಹೊಂದಿದ್ದಾನೆ. ಈ ಬಗ್ಗೆಯೂ ತನಿಖೆ ಆಗಬೇಕಿದೆ
-ವಿಜಯ್‌ ಕುಮಾರ್‌ ಸಿನ್ಹಾ, ಉಪ ಮುಖ್ಯಮಂತ್ರಿ ಬಿಹಾರ
ನೀಟ್‌ ಮತ್ತು ನೆಟ್‌ ಪರೀಕ್ಷೆಗಳನ್ನು ನಡೆಸುವಲ್ಲಿ ಎನ್‌ಟಿಎ ಲೋಪವನ್ನು ಸಹಿಸಲು ಆಗುವುದಿಲ್ಲ. ಎನ್‌ಟಿಎಯಲ್ಲಿನ ಬಿಕ್ಕಟ್ಟನ್ನು ಪರಿಹರಿಸಲು ಕೇಂದ್ರ ಸರ್ಕಾರ ತಕ್ಷಣ ಕ್ರಮ ತೆಗೆದುಕೊಳ್ಳಬೇಕು
-ಪಿಣರಾಯಿ ವಿಜಯನ್‌, ಮುಖ್ಯಮಂತ್ರಿ ಕೇರಳ
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಒಂದು ಪರೀಕ್ಷೆಯನ್ನೂ ಸರಿಯಾಗಿ ನಡೆಸಲು ಆಗುತ್ತಿಲ್ಲ. ಭವಿಷ್ಯದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ತಡೆಯಲು ಅದು ಯಾವ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ
-ಅಸಾದುದ್ದೀನ್‌ ಓವೈಸಿ, ಮುಖ್ಯಸ್ಥ ಎಐಎಂಐಎಂ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT