ಮಥುರಾ: ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ಮಾಗೋರಾ ಪೊಲೀಸ್ ಠಾಣೆಯಲ್ಲಿ ಮಹಿಳಾ ಸಹೋದ್ಯೋಗಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಮೇಲೆ ಸಬ್ ಇನ್ಸ್ಪೆಕ್ಟರ್ ಅನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬುಧವಾರ ರಾತ್ರಿ ಕುಡಿದ ಮತ್ತಿನಲ್ಲಿ ತನ್ನ ಕೋಣೆಗೆ ನುಗ್ಗಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಅಲ್ಲದೆ, ಈ ಹಿಂದೆ ತನ್ನ ಮೊಬೈಲ್ ಫೋನ್ನಲ್ಲಿ ಅಶ್ಲೀಲ ವಿಡಿಯೊಗಳು ಮತ್ತು ಚಿತ್ರಗಳನ್ನು ತೋರಿಸಲು ಪ್ರಯತ್ನಿಸಿದ್ದನೆಂದು ಆರೋಪಿಸಿ ಮಹಿಳಾ ಸಹೋದ್ಯೋಗಿ ನೀಡಿದ ದೂರಿನ ಮೇರೆಗೆ ಮೋಹಿತ್ ರಾಣಾ ಎಂಬ ಸಬ್ ಇನ್ಸ್ಪೆಕ್ಟರ್ ಅನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಆರೋಪಿ ಮೋಹಿತ್ ರಾಣಾ ಅವರನ್ನು ವಿಚಾರಣೆಗಾಗಿ ಪೊಲೀಸ್ ಠಾಣೆಗೆ ಕರೆದಾಗ, ಅವರು ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದರು. ತನ್ನ ಸ್ಮಾರ್ಟ್ ವಾಚ್ ಮತ್ತು ಮೊಬೈಲ್ ಫೋನ್ ಅನ್ನು ಎಸೆದು ಅಶ್ಲೀಲ ಚಿತ್ರಗಳು ಮತ್ತು ಫೋಟೊಗಳನ್ನು ನಾಶಮಾಡಲು ಯತ್ನಿಸಿದ್ದರು ಎಂದು ಪೊಲೀಸ್ ವರಿಷ್ಠಾಧಿಕಾರಿ ತ್ರಿಗುಣ ಬಿಸೆನ್ ಹೇಳಿದ್ದಾರೆ.

ತನಿಖೆ ಬಳಿಕ, ಮಹಿಳೆಯ ಆರೋಪಗಳು ದೃಢಪಟ್ಟಿದ್ದು, ರಾಣಾ ಅವರನ್ನು ಬಂಧಿಸಿ ಗುರುವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಸದ್ಯ ಪೊಲೀಸರು ಆತನ ಮೊಬೈಲ್ ಫೋನ್ಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.
.ಅಯೋಧ್ಯೆ: ಭಕ್ತರಿಗಾಗಿ ಗೋವಾ ಸರ್ಕಾರ ‘ರಾಮ ನಿವಾಸ’ ನಿರ್ಮಿಸಲಿದೆ;ಪ್ರಮೋದ್ ಸಾವಂತ್.Nagpur Violence | 17 ಮಂದಿ ಆರೋಪಿಗಳು ಮಾರ್ಚ್ 22ರವರೆಗೆ ಪೊಲೀಸ್ ಕಸ್ಟಡಿಗೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.