ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿರುವ ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು, ಟರ್ಕಿಯಿಂದ ಸೇಬು ಆಮದು ಮಾಡಿಕೊಳ್ಳುತ್ತಿರುವ ವಿಷಯಕ್ಕೆ ಸಂಬಂಧಿಸಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದು ರಾಜ್ಯದ ಸೇಬು ಬೆಳೆಗಾರರ ಹಿತಾಸಕ್ತಿಗಳಿಗೆ ಹಾನಿ ಮಾಡುತ್ತಿದೆ ಎಂದು ದೂರಿದ್ದಾರೆ.

ಹಿಮಾಚಲ ಪ್ರದೇಶ ಸೇರಿದಂತೆ ದೇಶದ ಸೇಬು ಬೆಳೆಗಾರರ ಹಿತಾಸಕ್ತಿಗಳನ್ನು ರಕ್ಷಿಸುವ ಸಲುವಾಗಿ ಸೇಬುಗಳ ಮೇಲಿನ ಆಮದು ಸುಂಕದಲ್ಲಿ ಸಾರ್ವತ್ರಿಕ ಹೆಚ್ಚಳವನ್ನು ಜಾರಿಗೆ ತರುವಂತೆ ಅವರು ಹಣಕಾಸು ಸಚಿವರನ್ನು ಒತ್ತಾಯಿಸಿದರು.

ಕೇಂದ್ರ ಸರ್ಕಾರದ ಗಮನ ಅಗತ್ಯವಿರುವ ರಾಜ್ಯಕ್ಕೆ ಸಂಬಂಧಿಸಿದ ವಿವಿಧ ಬಜೆಟ್ ಮತ್ತು ಹಣಕಾಸು ವಿಷಯಗಳ ಕುರಿತು ಮುಖ್ಯಮಂತ್ರಿ ಚರ್ಚೆ ನಡೆಸಿದರು.

ಹಿಮಾಚಲ ಮತ್ತು ಇತರ ವಿಶೇಷ ವರ್ಗದ ರಾಜ್ಯಗಳ ಸಾಲ ಮಿತಿಯನ್ನು ಕನಿಷ್ಠ ಎರಡು ಪ್ರತಿಶತದಷ್ಟು ಹೆಚ್ಚಿಸುವಂತೆ ಅವರು ಹಣಕಾಸು ಸಚಿವರನ್ನು ವಿನಂತಿಸಿದರು.

ಹಣಕಾಸು ನಿರ್ವಹಣೆಯನ್ನು ಸುಧಾರಿಸಲು ರಾಜ್ಯ ಸರ್ಕಾರ ತೆಗೆದುಕೊಂಡ ವಿವಿಧ ಉಪಕ್ರಮಗಳು ಮತ್ತು ಹಲವು ಆರ್ಥಿಕ ನಿರ್ಬಂಧಗಳ ಹೊರತಾಗಿಯೂ ಹಣಕಾಸು ಸಂಪನ್ಮೂಲಗಳನ್ನು ಹೆಚ್ಚಿಸಲು ತೆಗೆದುಕೊಂಡ ಕ್ರಮಗಳ ಬಗ್ಗೆ ಅವರು ಹಣಕಾಸು ಸಚಿವರಿಗೆ ವಿವರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.