ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮಿತ್‌ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ರಾಹುಲ್ ಗಾಂಧಿಗೆ ಜಾಮೀನು

Published 20 ಫೆಬ್ರುವರಿ 2024, 6:27 IST
Last Updated 20 ಫೆಬ್ರುವರಿ 2024, 6:27 IST
ಅಕ್ಷರ ಗಾತ್ರ

ಸುಲ್ತಾನಪುರ(ಉ.ಪ್ರ): 2018ರ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಉತ್ತರ ಪ್ರದೇಶದ ಸುಲ್ತಾನಪುರ ನ್ಯಾಯಾಲಯ ಮಂಗಳವಾರ ಜಾಮೀನು ಮಂಜೂರು ಮಾಡಿದೆ ಎಂದು ಸುದ್ದಿಸಂಸ್ಥೆ ಎಎನ್‌ಐ ವರದಿ ಮಾಡಿದೆ.

2018 ಮೇ 8 ರಂದು ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಕೇಂದ್ರ ಸಚಿವ ಅಮಿತ್ ಶಾ ವಿರುದ್ದ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದರು ಎಂದು ಆರೋಪಿಸಿ ವಿಜಯ್‌ ಮಿಶ್ರಾ ಎಂಬುವವರು ಆಗಸ್ಟ್‌ 4, 2018ರಂದು ರಾಹುಲ್‌ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

‘ಬಿಜೆಪಿಯು ತಮ್ಮದು ಪ್ರಾಮಾಣಿಕ ಮತ್ತು ಸ್ವಚ್ಛ ರಾಜಕಾರಣದಲ್ಲಿ ನಂಬಿಕೆಯಿಟ್ಟಿರುವ ಪಕ್ಷ ಎಂದು ಹೇಳಿಕೊಳ್ಳುತ್ತದೆ. ಆದರೆ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ವ್ಯಕ್ತಿಯನ್ನು(ಅಮಿತ್ ಶಾ) ಪಕ್ಷದ ಅಧ್ಯಕ್ಷ ಸ್ಥಾನದಲ್ಲಿ ಕೂರಿಸಿದೆ’ ಎಂದು ರಾಹುಲ್ ಗಾಂಧಿ ಆಗ ಹೇಳಿದ್ದರು.

ಭಾರತ್ ಜೋಡೊ ನ್ಯಾಯ ಯಾತ್ರೆಯಲ್ಲಿ ನಿರತರಾಗಿದ್ದರಿಂದ ಜ.18ರಂದು ನಡೆದ ವಿಚಾರಣೆಯಲ್ಲಿ ರಾಹುಲ್ ಗಾಂಧಿ ಹಾಜರಾಗಿರಲಿಲ್ಲ.

‘ಬಿಜೆಪಿ ಅತಿದೊಡ್ಡ ಪಕ್ಷವಾಗಿದ್ದು, ಪಕ್ಷದ ಪ್ರಮುಖ ನಾಯಕನನ್ನು ಕೊಲೆಗಾರ ಎಂದು ಕರೆಯುವುದು ಸರಿಯಲ್ಲ’ ಎಂದು ಮಿಶ್ರಾ ನ್ಯಾಯಾಲಯಕ್ಕೆ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT