ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿನೀವಾಕ್ಕೆ ತೆರಳಲು ಶಶಿ ತರೂರ್‌ಗೆ ದೆಹಲಿ ನ್ಯಾಯಾಲಯ ಅನುಮತಿ

Last Updated 20 ಆಗಸ್ಟ್ 2018, 18:51 IST
ಅಕ್ಷರ ಗಾತ್ರ

ನವದೆಹಲಿ: ಕೇರಳ ಪ್ರವಾಹ ಸಂತ್ರಸ್ತರಿಗೆ ಅಂತರರಾಷ್ಟ್ರೀಯ ಮಟ್ಟದಲ್ಲಿ ನೆರವು ಪಡೆಯಲು ಹಾಗೂ ಶನಿವಾರ ನಿಧನ ಹೊಂದಿದ ವಿಶ್ವಸಂಸ್ಥೆಯ ಮಾಜಿ ಮಹಾಪ್ರಧಾನ ಕಾರ್ಯದರ್ಶಿ ಕೋಫಿ ಅನ್ನಾನ್ ಕುಟುಂಬಕ್ಕೆ ಸಾಂತ್ವನ ಹೇಳುವ ಸಲುವಾಗಿ ಜಿನೀವಾಕ್ಕೆ ತೆರಳಲು ಕಾಂಗ್ರೆಸ್‌ ಮುಖಂಡ ಶಶಿ ತರೂರ್ ಅವರಿಗೆ ದೆಹಲಿ ನ್ಯಾಯಾಲಯ ಅನುಮತಿ ನೀಡಿದೆ.

ಅನ್ನಾನ್ ಅವರು ಮಹಾಪ್ರಧಾನ ಕಾರ್ಯದರ್ಶಿಯಾಗಿದ್ದ ವೇಳೆ ಶಶಿ ತರೂರ್ ವಿಶ್ವಸಂಸ್ಥೆಯಲ್ಲಿ ಅವರೊಂದಿಗೆ ಕೆಲಸ ಮಾಡಿದ್ದರು.

ತರೂರ್ ಪರ ಹಾಜರಾದ ಹಿರಿಯ ವಕೀಲರು, ಕೇರಳ ಪ್ರವಾಹ ಸಂತಸ್ತರಿಗೆ ಅಂತರರಾಷ್ಟ್ರೀಯ ಮಟ್ಟದಲ್ಲಿ ನೆರವು ಕೋರಲು ತರೂರ್‌ ಪ್ರವಾಸ ಕೈಗೊಳ್ಳುತ್ತಿದ್ದಾರೆ ಎಂದು ಹೇಳಿದರು. ನಾಲ್ಕು ವರ್ಷಗಳ ಹಿಂದೆ ನಿಗೂಢವಾಗಿ ನಿಧನರಾದ ಪತ್ನಿ ಸುನಂದಾ ಪುಷ್ಕರ್‌ ಪ್ರಕರಣದ ವಿಚಾರಣೆ ಎದುರಿಸುತ್ತಿರುವ ತರೂರ್‌ ಜಾಮೀನು ಪಡೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT