ಮುಂಬೈ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಸುನೇತ್ರಾ ಪವಾರ್ ಅವರು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
.ಎನ್ಸಿಪಿಯ ರಾಷ್ಟ್ರೀಯ ಅಧ್ಯಕ್ಷರಾಗಿ ಫೆ. 26ರಂದು ಸುನೇತ್ರಾ ಪವಾರ್ ಪ್ರಮಾಣ.
ಜ.28ರಂದು ನಡೆದ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಮೃತಪಟ್ಟ ಬಳಿಕ ಆ ಸ್ಥಾನಕ್ಕೆ ಅವರ ಪತ್ನಿ 62 ವರ್ಷದ ಸುನೇತ್ರಾ ಅವರನ್ನು ಆಯ್ಕೆ ಮಾಡಲಾಗಿದೆ.

ಮುಂಬೈನಲ್ಲಿ ನಡೆದ ಎನ್ಸಿಪಿ ಸಭೆಯಲ್ಲಿ ಸುನೇತ್ರಾ ಅವರನ್ನು ಆಯ್ಕೆ ಮಾಡಲಾಗಿದೆ. ಪಕ್ಷದ ಕಾರ್ಯಾಧ್ಯಕ್ಷ ಪ್ರಫುಲ್ ಪಟೇಲ್ ಅವರು ಸುನೇತ್ರಾ ಹೆಸರನ್ನು ಸೂಚಿಸಿದರು.

ಹಾಜರಿದ್ದ ಸದಸ್ಯರೆಲ್ಲರೂ ಅನುಮೋದನೆ ನೀಡಿದರು. ಸುನೇತ್ರಾ ಅವರು ಅವಿರೋಧವಾಗಿ ಆಯ್ಕೆಯಾದರು.
.ಸುನೇತ್ರಾ ಡಿಸಿಎಂ ಆಗುವುದರ ಬಗ್ಗೆ ನನಗೇನು ಗೊತ್ತಿಲ್ಲ: ಶರದ್ ಪವಾರ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.