ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಸಿಲ ಝಳದಿಂದ ಸಾವು: ಮಹಾರಾಷ್ಟ್ರದಲ್ಲಿ ಸಿಎಂ ಶಿಂದೆ ಸರ್ಕಾರ ವಜಾಕ್ಕೆ ಆಗ್ರಹ

Last Updated 19 ಏಪ್ರಿಲ್ 2023, 12:21 IST
ಅಕ್ಷರ ಗಾತ್ರ

ಮುಂಬೈ: ಮಹಾರಾಷ್ಟ್ರ ಭೂಷಣ್‌ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಬಿಸಿಲಿನ ಝಳ ತಾಳಲಾರದೇ 14 ಜನರು ಪ್ರಾಣ ಕಳೆದುಕೊಂಡಿರುವ ಹಿನ್ನೆಲೆಯಲ್ಲಿ ಏಕನಾಥ ಶಿಂದೆ ಸರ್ಕಾರವನ್ನು ವಜಾಗೊಳಿಸಬೇಕು ಎಂದು ರಾಜ್ಯ ಕಾಂಗ್ರೆಸ್‌ ಅಧ್ಯಕ್ಷ ನಾನಾ ಪಟೋಲೆ ರಾಜ್ಯಪಾಲ ರಮೇಶ್‌ ಬೈಸ್‌ ಅವರನ್ನು ಒತ್ತಾಯಿಸಿದ್ದಾರೆ.

ಮುಂಬೈನ ಖಾರ್‌ಘರ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಜನರು ಮೃತಪಟ್ಟಿರುವ ಬಗ್ಗೆ ಬುಧವಾರ ಟ್ವಿಟರ್‌ನಲ್ಲಿ ವಾಗ್ದಾಳಿ ನಡೆಸಿರುವ ಅವರು, ‘ಇವು ಕಾಲ್ತುಳಿತದಿಂದ ಸಂಭವಿಸಿದ ಸಾವೇ? ಸರ್ಕಾರ ಏನನ್ನು ಮುಚ್ಚಿಡಲು ಯತ್ನಿಸುತ್ತಿದೆ’ ಎಂದು ಪ್ರಶ್ನಿಸಿದ್ದಾರೆ. ಇದರೊಂದಿಗೆ ಭಾನುವಾರ ನಡೆದ ಕಾರ್ಯಕ್ರಮದ ವಿಡಿಯೊವನ್ನು ಲಗತ್ತಿಸಿದ್ದಾರೆ. ಅದರಲ್ಲಿ ಜನರು ತೀವ್ರ ಬಳಲಿರುವ, ನಿತ್ರಾಣಗೊಂಡಿರುವ ದೃಶ್ಯವಿದೆ.

‘ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಕೂಡಲೇ ರಾಜೀನಾಮೆ ನೀಡಬೇಕು. ರಾಜ್ಯಪಾಲರು ಸರ್ಕಾರವನ್ನು ವಜಾ ಮಾಡಬೇಕು’ ಎಂದು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT