ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ ಆಸ್ಪತ್ರೆಗಳಲ್ಲಿ ಪ್ರಮಾಣಿತವಲ್ಲದ ಔಷಧಿ ಪೂರೈಕೆ: ಸಿಬಿಐ ತನಿಖೆಗೆ ಶಿಫಾರಸು

Published 23 ಡಿಸೆಂಬರ್ 2023, 10:02 IST
Last Updated 23 ಡಿಸೆಂಬರ್ 2023, 10:02 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿಯ ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ರಮಾಣಿತವಲ್ಲದ ಔಷಧಗಳ ಖರೀದಿ ಹಾಗೂ ಪೂರೈಕೆ ಆರೋಪ ಕೇಳಿಬಂದಿದೆ. ಪ್ರಕರಣದ ತನಿಖೆಯನ್ನು ಲೆಫ್ಟಿನೆಂಟ್ ಗವರ್ನರ್ ವಿ.ಕೆ ಸಕ್ಸೇನಾ ಸಿಬಿಐಗೆ ವಹಿಸಿದ್ದಾರೆ ಎಂದು ರಾಜ್ ನಿವಾಸ್(ಲೆಫ್ಟಿನೆಂಟ್ ಗವರ್ನರ್ ಅವರ ಅಧಿಕೃತ ನಿವಾಸ) ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

‘ಈ ಔಷಧಿಗಳನ್ನು ಲಕ್ಷಗಟ್ಟಲೇ ರೋಗಿಗಳಿಗೆ ನೀಡುತ್ತಿರುವುದು ಕಳವಳಕಾರಿಯಾಗಿದೆ' ಎಂದು ಲೆಫ್ಟಿನೆಂಟ್ ಗವರ್ನರ್ ಅವರು ಮುಖ್ಯ ಕಾರ್ಯದರ್ಶಿ ನರೇಶ್ ಕುಮಾರ್ ಅವರಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಪ್ರಮಾಣಿತವಲ್ಲದ ಔಷಧಗಳನ್ನು ಲಕ್ಷಾಂತರ ಅಸಹಾಯಕ ಜನರು ಮತ್ತು ರೋಗಿಗಳಿಗೆ ಸರಬರಾಜು ಮಾಡಲಾಗುತ್ತಿರುವ ಬಗ್ಗೆ ನಾನು ದುಃಖಿತನಾಗಿದ್ದೇನೆ ಎಂದು ಸಕ್ಸೇನಾ ಹೇಳಿದ್ದಾರೆ.

ದೆಹಲಿ ಆರೋಗ್ಯ ಸೇವೆಗಳ (DHS) ಅಡಿಯಲ್ಲಿ ಸೆಂಟ್ರಲ್ ಪ್ರೊಕ್ಯೂರ್‌ಮೆಂಟ್ ಏಜೆನ್ಸಿ (ಸಿಪಿಎ) ಖರೀದಿಸಿದ ಈ ಔಷಧಿಗಳನ್ನು ದೆಹಲಿ ಸರ್ಕಾರಿ ಆಸ್ಪತ್ರೆಗಳಿಗೆ ಸರಬರಾಜು ಮಾಡಲಾಗಿದೆ. ಜತೆಗೆ 'ಮೊಹಲ್ಲಾ ಕ್ಲಿನಿಕ್'ಗಳಿಗೂ ಸರಬರಾಜು ಮಾಡಿರಬಹುದು ಎಂದು ಲೆಫ್ಟಿನೆಂಟ್ ಗವರ್ನರ್ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಔಷಧಗಳು ಮತ್ತು ಸೌಂದರ್ಯವರ್ಧಕಗಳ ಕಾಯಿದೆ, 1940ರ ಅಡಿಯಲ್ಲಿ ನಿಯಮಗಳು ಮತ್ತು ಶಾಸನಬದ್ಧ ನಿಬಂಧನೆಗಳ ಪ್ರಕಾರ ಸರ್ಕಾರಿ ಮತ್ತು ಖಾಸಗಿ ವಿಶ್ಲೇಷಕರು/ಪ್ರಯೋಗಾಲಯಗಳು ಪರೀಕ್ಷಿಸಿದ್ದು, ಇವುಗಳು ಪ್ರಮಾಣಿತ ಗುಣಮಟ್ಟವಲ್ಲ ಎಂದು ವರ್ಗೀಕರಿಸಲಾಗಿದೆ.

ಈ ಔಷಧಿಗಳು ಸಾರ್ವಜನಿಕರ ಆರೋಗ್ಯ ಮತ್ತು ಸುರಕ್ಷತೆಗೆ ಗಂಭೀರ ಬೆದರಿಕೆಯಾಗಿದೆ. ಜತೆಗೆ ಜನರ ಜೀವಕ್ಕೆ ಅಪಾಯವನ್ನುಂಟುಮಾಡುವ ಸಾಮರ್ಥ್ಯವನ್ನು ಹೊಂದಿವೆ ಎಂದು ಸಕ್ಸೇನಾ ಕಳವಳ ವ್ಯಕ್ತಪಡಿಸಿದ್ದಾರೆ.

‘ದೆಹಲಿಯ ಸರ್ಕಾರಿ ಆಸ್ಪತ್ರೆಗಳಲ್ಲಿ ಕಳಪೆ ಗುಣಮಟ್ಟದ ಔಷಧಗಳನ್ನು ಸರಬರಾಜು ಮಾಡಲಾಗುತ್ತಿದೆ ಎಂಬ ದೂರುಗಳು ಬಂದಿದ್ದವು. ಈ ಕುರಿತು ವಿಜಿಲೆನ್ಸ್ ನಿರ್ದೇಶನಾಲಯ ವರದಿ ಸಲ್ಲಿಸಿತ್ತು. ನಂತರ ಸರ್ಕಾರಿ ಆಸ್ಪತ್ರೆಗಳಿಂದ ಔಷಧಿಗಳ ಮಾದರಿ ಸಂಗ್ರಹಿಸಲಾಗಿದೆ' ಎಂದು ರಾಜ್ ನಿವಾಸ್ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT