ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯ (ಎಸ್ಐಆರ್) ಭಾಗವಾಗಿ ಸಲ್ಲಿಕೆಯಾಗಿರುವ 50 ಲಕ್ಷ ದೂರುಗಳು ಮತ್ತು ಆಕ್ಷೇಪಗಳ ವಿಚಾರಣೆಗಾಗಿ ಸಿವಿಲ್ ನ್ಯಾಯಾಧೀಶರನ್ನು ನಿಯೋಜಿಸಲು ಕಲ್ಕತ್ತಾ ಹೈಕೋರ್ಟ್ಗೆ ಸುಪ್ರೀಂ ಕೋರ್ಟ್ ಮಂಗಳವಾರ ಅನುಮತಿ ನೀಡಿದೆ.

ಜಾರ್ಖಂಡ್ ಮತ್ತು ಒಡಿಶಾದ ನ್ಯಾಯಾಂಗ ಅಧಿಕಾರಿಗಳ ಸೇವೆಯನ್ನೂ ಬಳಸಿಕೊಳ್ಳಬಹುದು ಎಂದೂ ನ್ಯಾಯಾಲಯ ತಿಳಿಸಿದೆ.

ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿಗಳಾದ ಜಾಯ್ಮಾಲ್ಯಾ ಬಾಗ್ಚಿ ಮತ್ತು ವಿಪುಲ್ ಎಂ.ಪಂಚೋಲಿ ಅವರನ್ನು ಒಳಗೊಂಡ ನ್ಯಾಯಪೀಠವು ಫೆಬ್ರುವರಿ 28ರಂದು ಮತದಾರರ ಅಂತಿಮ ಪಟ್ಟಿಯನ್ನು ಪ್ರಕಟಿಸಲು ಚುನಾವಣಾ ಆಯೋಗಕ್ಕೆ ಅನುಮತಿ ನೀಡಿತು. ಪರಿಶೀಲನಾ ಪ್ರಕ್ರಿಯೆ ಪೂರ್ಣಗೊಂಡ ನಂತರ ಆಯೋಗವು ಮತ್ತೊಮ್ಮೆ ಪೂರಕ ಪಟ್ಟಿಯನ್ನು ಬಿಡುಗಡೆ ಮಾಡಬಹುದು ಎಂದು ಸ್ಪಷ್ಟನೆ ನೀಡಿತು.

ಎಸ್ಐಆರ್ಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗ ಎರಡರ ಕಾಳಜಿಯೂ ಸಮಾನವಾಗಿ ಮುಖ್ಯವಾದುದು. ಮತದಾರರ ಪಟ್ಟಿಯ ಪಾವಿತ್ರ್ಯ ಮತ್ತು ಶುದ್ಧತೆ ಖಚಿತಪಡಿಸುವುದು ಮುಖ್ಯ ಎಂದು ಅಭಿಪ್ರಾಯಪಟ್ಟಿತು.

ಕನಿಷ್ಠ ಮೂರು ವರ್ಷ ಅನುಭವವಿರುವ ಸಿವಿಲ್ ನ್ಯಾಯಾಧೀಶರನ್ನು ನೇಮಕ ಮಾಡುವಂತೆ ಕಲ್ಕತ್ತಾ ಹೈಕೋರ್ಟ್ಗೆ ಸುಪ್ರೀಂ ಕೋರ್ಟ್ ಸೂಚಿಸಿತು.

‘ಕಲ್ಕತ್ತಾ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಪ್ರಕಾರ ಒಬ್ಬ ಅಧಿಕಾರಿ ದಿನಕ್ಕೆ 215 ಪ್ರಕರಣಗಳ ವಿಚಾರಣೆ ನಡೆಸಿದರೂ 50 ಲಕ್ಷ ಅರ್ಜಿಗಳ ವಿಲೇವಾರಿಗೆ 80 ದಿನ ಬೇಕಾಗುತ್ತದೆ. ಹೀಗಾಗಿ ಕ್ಷಿಪ್ರಗತಿಯಲ್ಲಿ ವಿಚಾರಣೆ ಪೂರ್ಣಗೊಳಿಸಲು ಕನಿಷ್ಠ 3 ವರ್ಷ ಅನುಭವವಿರುವ ನ್ಯಾಯಾಂಗ ಅಧಿಕಾರಿಗಳ ಸೇವೆಯನ್ನು ಬಳಸಿಕೊಳ್ಳಬಹುದು. ಹಾಗೆಯೇ ಜಾರ್ಖಂಡ್ ಮತ್ತು ಒಡಿಶಾ ರಾಜ್ಯಗಳ ಹಾಲಿ ಮತ್ತು ನಿವೃತ್ತ ನ್ಯಾಯಾಂಗ ಅಧಿಕಾರಿಗಳ ಸೇವೆಯನ್ನೂ ಬಳಸಿಕೊಳ್ಳಬಹುದು. ಈ ರಾಜ್ಯಗಳ ಹೈಕೋರ್ಟ್ ಮುಖ್ಯನ್ಯಾಯಮೂರ್ತಿ ಅವರಿಗೆ ನಾವೂ ಮನವಿ ಮಾಡುತ್ತೇವೆ’ ಎಂದು ನ್ಯಾಯಪೀಠ ಹೇಳಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.