ಭಾನುವಾರ, 21 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕಾವಡ್ ಯಾತ್ರೆ: ಉತ್ತರ ಪ್ರದೇಶ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ

ಅಕ್ಷರ ಗಾತ್ರ

ನವದೆಹಲಿ: ಕಾವಡ್ ಯಾತ್ರೆಗೆ ಅನುಮತಿ ನೀಡಿರುವ ಉತ್ತರ ಪ್ರದೇಶ ಸರ್ಕಾರವನ್ನು ಸುಪ್ರೀಂ ಕೋರ್ಟ್ ಶುಕ್ರವಾರ ಪ್ರಶ್ನಿಸಿದ್ದು, ನಿರ್ಧಾರವನ್ನು ಮತ್ತೊಮ್ಮೆ ಪರಿಶೀಲಿಸಿ ಎಂದು ಸೂಚಿಸಿದೆ.

ರಥ ಯಾತ್ರೆಯ ನಿರ್ಧಾರವನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಿ. ಇಲ್ಲವಾದರೆ ಸೋಮವಾರ ಸುಪ್ರೀಂ ಕೋರ್ಟ್ ಆದೇಶ ಪ್ರಕಟಿಸುತ್ತದೆ ಎಂದು ಉತ್ತರ ಪ್ರದೇಶ ಸರ್ಕಾರಕ್ಕೆ ಸೂಚನೆ ನೀಡಲಾಗಿದೆ.

ನ್ಯಾಯಾಧೀಶರಾದ ಆರ್. ಎಫ್. ನಾರಿಮನ್ ಅವರು ಅಧ್ಯಕ್ಷತೆ ವಹಿಸಿದ್ದ ಪೀಠ, ಎಲ್ಲ ಜನರ ಧಾರ್ಮಿಕ ಭಾವನೆ ಮತ್ತು ಇತರ ಅಗತ್ಯಗಳ ಹೊರತಾಗಿಯೂ, ಜನರ ಜೀವಿಸುವ ಹಕ್ಕು ಅಮೂಲ್ಯವಾಗಿದೆ ಎಂದಿದ್ದಾರೆ. ಈ ಸಂದರ್ಭದಲ್ಲಿ ಜನರನ್ನು ಸೇರಿಸಿ ರಥ ಯಾತ್ರೆ ನಡೆಸುವುದು ಸೂಕ್ತವಲ್ಲ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.

ಸಾಂಕೇತಿಕ ರಥ ಯಾತ್ರೆಗೆ ಅನುಮತಿ ನೀಡಬೇಕು ಎಂದು ಸರ್ಕಾರ ಪರ ಹಿರಿಯ ವಕೀಲ, ಸಿ. ಎಸ್. ವೈದ್ಯನಾಥನ್ ಹೇಳಿದ್ದಾರೆ.

ಈ ಬಗ್ಗೆ ಸರ್ಕಾರ ಸೋಮವಾರ ಅಫಿಡವಿಟ್ ಸಲ್ಲಿಸಲಿದೆ. ಸುಪ್ರೀಂ ಕೋರ್ಟ್ ಮುಂದಿನ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT