ನವದೆಹಲಿ: ಕೇಂದ್ರ ಮಾಹಿತಿ ಆಯೋಗ (ಸಿಐಸಿ) ಮತ್ತು ರಾಜ್ಯ ಮಾಹಿತಿ ಆಯೋಗದಲ್ಲಿ(ಎಸ್ಐಸಿ) ಮಾಹಿತಿ ಆಯುಕ್ತರ ಸ್ಥಾನಗಳನ್ನು ಸಮಯಕ್ಕೆ ಸರಿಯಾಗಿ ಭರ್ತಿ ಮಾಡುವಂತೆ ನ್ಯಾಯಾಲಯವು ನೀಡಿದ್ದ ತೀರ್ಪಿನ ಅನುಪಾಲನಾ ವರದಿಯನ್ನು ಸಲ್ಲಿಸುವಂತೆ ಸುಪ್ರೀಂಕೋರ್ಟ್ ಬುಧವಾರ ಸೂಚಿಸಿದೆ.

‘ಸಿಐಸಿ ಮತ್ತು ಎಸ್ಐಸಿಗಳಲ್ಲಿ ಖಾಲಿಯಿರುವ ಹುದ್ದೆಗಳು ಮತ್ತು ಅವುಗಳನ್ನು ಭರ್ತಿ ಮಾಡಲು ತೆಗೆದುಕೊಳ್ಳಲಾದ ಕ್ರಮಗಳ ಬಗ್ಗೆ ನಾಲ್ಕು ವಾರಗಳೊಳಗೆ ನ್ಯಾಯಾಲಯಕ್ಕೆ ವರದಿ ಸಲ್ಲಿಸುವಂತೆ’ ನ್ಯಾಯಮೂರ್ತಿ ಎಸ್.ಅಬ್ದುಲ್ ನಜೀರ್ ನೇತೃತ್ವದ ಪೀಠವು ಕೇಂದ್ರ ಮತ್ತು ರಾಜ್ಯಗಳಿಗೆ ಸೂಚಿಸಿದೆ.

ಮಾಹಿತಿ ಹಕ್ಕು ಕಾಯ್ದೆಯಡಿ ಖಾಲಿ ಇರುವ ಮಾಹಿತಿ ಆಯುಕ್ತರ ಸ್ಥಾನಗಳನ್ನು ಸಮಯಕ್ಕೆ ಸರಿಯಾಗಿ ಭರ್ತಿ ಮಾಡುವಂತೆ ಕೇಂದ್ರ ಮಾಹಿತಿ ಆಯೋಗ (ಸಿಐಸಿ) ಮತ್ತು ರಾಜ್ಯ ಮಾಹಿತಿ ಆಯೋಗಕ್ಕೆ(ಎಸ್ಐಸಿ) ಸುಪ್ರೀಂಕೋರ್ಟ್ 2019ರಲ್ಲಿ ಸೂಚಿಸಿತ್ತು.

ಈ ತೀರ್ಪನ್ನು ಸರಿಯಾದ ರೀತಿಯಲ್ಲಿ ಅನುಷ್ಠಾನಕ್ಕೆ ತರಲಾಗಿದೆಯೇ ಎಂಬುದನ್ನು ಪ್ರಶ್ನಿಸಿ ಆರ್ಟಿಐ ಕಾರ್ಯಕರ್ತೆ ಅಂಜಲಿ ಭಾರಧ್ವಜ್ ಅವರು ಸುಪ್ರೀಂಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.