ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳಾಗಿ ಇಬ್ಬರನ್ನು ನೇಮಿಸಲು ಕೊಲಿಜಿಯಂ ಶಿಫಾರಸು

Published 16 ಮೇ 2023, 14:08 IST
Last Updated 16 ಮೇ 2023, 14:08 IST
ಅಕ್ಷರ ಗಾತ್ರ

ನವದೆಹಲಿ: ಆಂಧ್ರಪ್ರದೇಶ ಹೈಕೋರ್ಟ್‌ನ ಮುಖ್ಯನ್ಯಾಯಮೂರ್ತಿ ಪ್ರಶಾಂತ್‌ ಕುಮಾರ್ ಮಿಶ್ರಾ ಹಾಗೂ ಹಿರಿಯ ವಕೀಲ ಕೆ.ವಿ ವಿಶ್ವನಾಥನ್‌ ಅವರನ್ನು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳನ್ನಾಗಿ ನೇಮಕ ಮಾಡಬೇಕು ಎಂದು ಸಿಜೆಐ ಡಿ.ವೈ ಚಂದ್ರಚೂಡ್‌ ನೇತೃತ್ವದ ಕೊಲಿಜಿಯಂ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ.

ಒಂದು ವೇಳೆ ಕೊಲಿಜಿಯಂನ ಶಿಫಾರಸ್ಸನ್ನು ಕೇಂದ್ರ ಸರ್ಕಾರ ಒಪ್ಪಿಕೊಂಡಿದ್ದೇ ಆದಲ್ಲಿ, 2030ರ ಆಗಸ್ಟ್‌ 11 ರಂದು ನಿವೃತ್ತಿಯಾಗಲಿರುವ ನ್ಯಾ. ಜೆ.ಬಿ ಪರ್ಡಿವಾಲ ಅವರ ಬಳಿಕ ದೇಶದ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಳ್ಳಲಿದ್ದಾರೆ. 2031ಮೇ 25ರವರೆಗೆ ಇವರ ಅಧಿಕಾರವಧಿ ಇರಲಿದೆ.

ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳಾಗಿದ್ದ ನ್ಯಾ. ದಿನೇಶ್‌ ಮಹೇಶ್ವರಿ ಹಾಗೂ ಎಂ.ಆರ್‌ ಷಾ ಅವರು ಕಳೆದ ವಾರ ನಿವೃತ್ತಿ ಹೊಂದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT