ನವದೆಹಲಿ: ಕಾರಾಗೃಹಗಳಲ್ಲಿನ ದಟ್ಟಣೆ ನಿವಾರಣೆಗೆ ತೆಗೆದುಕೊಂಡಿರುವ ಕ್ರಮಗಳು ಹಾಗೂ ಪ್ರತಿಯೊಂದು ಕಾರಾಗೃಹದಲ್ಲಿನ ಅನುಮೋದಿತ ಸಾಮರ್ಥ್ಯಕ್ಕೆ ಸಂಬಂಧಿಸಿದ ಪರಿಷ್ಕೃತ ವಿವರಗಳನ್ನು ಸಲ್ಲಿಸುವಂತೆ ರಾಜ್ಯಗಳಿಗೆ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.

ಜತೆಗೆ ವರದಿ ಸಲ್ಲಿಕೆಗೆ ಮೇ18ರ ವರೆಗೆ ಗಡುವು ನೀಡಿದೆ.

ಕಾರಾಗೃಹಗಳಲ್ಲಿನ ಅಮಾನವೀಯ ಸ್ಥಿತಿಗತಿ ಸಂಬಂಧಿಸಿದಂತೆ ಸ್ವಯಂಪ್ರೇರಿತ ಪ್ರಕರಣವನ್ನು ಸುಪ್ರೀಂ ಕೋರ್ಟ್ ದಾಖಲಿಸಿಕೊಂಡಿದ್ದು, ನ್ಯಾಯಮೂರ್ತಿ ವಿಕ್ರಮ್ ನಾಥ್ ಹಾಗೂ ನ್ಯಾಯಮೂರ್ತಿ ಸಂದೀಪ್ ಮೆಹ್ತಾ ಅವರಿದ್ದ ಪೀಠವು ಈ ಪ್ರಕರಣದ ವಿಚಾರಣೆ ನಡೆಸಿದೆ.

ಕಾರಾಗೃಹ ಸ್ಥಿತಿಗತಿ ಕುರಿತು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳು ಸಲ್ಲಿಸಿರುವ ಅಂಕಿ–ಅಂಶದ ವರದಿಗಳು 2023ಕ್ಕೆ ಸಂಬಂಧಿಸಿದ್ದು ಎಂದು ಅಮಿಕಸ್ ಕ್ಯೂರಿ ಆಗಿರುವ ಹಿರಿಯ ವಕೀಲ ಗೌರವ್ ಅಗರ್ವಾಲ್ ಅವರು ನ್ಯಾಯಪೀಠದ ಗಮನಕ್ಕೆ ತಂದಿದ್ದಾರೆ.

ಹೀಗಾಗಿ, 2026ರ ಮಾರ್ಚ್1ರವರೆಗಿನ ದಾಖಲಾತಿಗೆ ಅನುಗುಣವಾಗಿ ವಿವರಗಳನ್ನು ಸಲ್ಲಿಸಲು ನ್ಯಾಯಪೀಠ ನಿರ್ದೇಶಿಸಿದೆ. ಜತೆಗೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿರುವ ಒಟ್ಟು ಮಹಿಳಾ ಕಾರಾಗೃಹಗಳ ಸಂಖ್ಯೆ ಎಷ್ಟು? ಅಲ್ಲಿ ಏನೆಲ್ಲಾ ಸೌಲಭ್ಯಗಳಿದೆ ? ಮಹಿಳಾ ಕೈದಿಗಳ ಜತೆಗಿರುವ ಮಕ್ಕಳ ವಿದ್ಯಾಭ್ಯಾಸ ಹಾಗೂ ಕಲ್ಯಾಣಕ್ಕೆ ಸಂಬಂಧಿಸಿದಂತೆ ಏನೆಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬ ವಿವರಗಳನ್ನು ಸಲ್ಲಿಸುವಂತೆಯೂ ಪೀಠ ಸೂಚಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.