ನವದೆಹಲಿ: ದೇಶದ ಎಲ್ಲ ಉನ್ನತ ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳ ಆತ್ಮಹತ್ಯೆ ಅಥವಾ ಅಸಹಜ ಸಾವುಗಳ ಬಗ್ಗೆ ಕೂಡಲೇ ಪೊಲೀಸರಿಗೆ ವರದಿ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ಗುರುವಾರ ನಿರ್ದೇಶನ ನೀಡಿದೆ.

ಉನ್ನತ ಶಿಕ್ಷಣ ಸಂಸ್ಥೆಗಳು ತಮ್ಮ ಆವರಣದಲ್ಲಿ ಸಂಭವಿಸುವ ವಿದ್ಯಾರ್ಥಿಗಳ ಆತ್ಮಹತ್ಯೆ ಅಥವಾ ಅಸಹಜ ಸಾವುಗಳ ಬಗ್ಗೆ ವಾರ್ಷಿಕ ವರದಿಯನ್ನು ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ಮತ್ತು ವೃತ್ತಿಪರ ಕೋರ್ಸ್ಗಳ ಮೇಲ್ವಿಚಾರಣೆ ನಡೆಸುವ ಸಂಸ್ಥೆಗಳಿಗೆ ಸಲ್ಲಿಸಬೇಕು ಎಂದು ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದೀವಾಲ ಮತ್ತು ಆರ್. ಮಹದೇವನ್ ಅವರನ್ನೊಳಗೊಂಡ ಪೀಠವು ಸೂಚಿಸಿದೆ.

ಸುರಕ್ಷಿತ, ಸಮಾನ, ಒಳಗೊಳ್ಳುವ ಮತ್ತು ಕಲಿಕೆಗೆ ಪೂರಕವಾದ ಸ್ಥಳಗಳಾಗಿರುವುದನ್ನು ಖಚಿತಪಡಿಸಿಕೊಳ್ಳುವ ಮೂಲಭೂತ ಕರ್ತವ್ಯದಿಂದ ಉನ್ನತ ಶಿಕ್ಷಣ ಸಂಸ್ಥೆಗಳು ನುಣುಚಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.