ನವದೆಹಲಿ: ಕ್ಯಾನ್ಸರ್ನಿಂದ ಬಳಲುತ್ತಿರುವ ಹಿರಿಯ ನಾಗರಿಕರೊಬ್ಬರ ನೆರವಿಗೆ ಬಂದಿರುವ ಸುಪ್ರೀಂ ಕೋರ್ಟ್, ಕಳೆದ ಒಂಬತ್ತು ವರ್ಷಗಳಿಂದ ಬಾಕಿ ಉಳಿದಿರುವ ಅವರ ಪಿಂಚಣಿ ಮತ್ತು ನಿವೃತ್ತಿ ನಂತರದ ಸೌಲಭ್ಯಗಳಿಗೆ ಸಂಬಂಧಿಸಿದ ಅರ್ಜಿಯ ತುರ್ತು ವಿಚಾರಣೆ ನಡೆಸುವಂತೆ ಅಲಹಾಬಾದ್ ಹೈಕೋರ್ಟ್ಗೆ ಗುರುವಾರ ಸೂಚಿಸಿದೆ.

ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜಾಯ್ಮಾಲ್ಯಾ ಬಾಗ್ಚಿ ಅವರನ್ನೊಳಗೊಂಡ ಪೀಠವು, 77 ವರ್ಷದ ವ್ಯಕ್ತಿಯ ಪ್ರಕರಣವನ್ನು ಸಹಾನುಭೂತಿ ಮತ್ತು ಆದ್ಯತೆಯ ಮೇರೆಗೆ ವಿಚಾರಣೆ ನಡೆಸುವಂತೆ ನಿರ್ದೇಶನ ನೀಡಿದೆ.

ಉತ್ತರ ಪ್ರದೇಶದಲ್ಲಿ ಸರ್ಕಾರಿ ಕೆಲಸದಲ್ಲಿದ್ದ ರಾಮ್ ಶಂಕರ್ ಎಂಬವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸುತ್ತಿದೆ. ತನ್ನ ಹಕ್ಕಿನ ಕುರಿತಾದ ಪ್ರಕರಣದ ತೀರ್ಪು ವಿಳಂಬವಾಗುತ್ತಿರುವುದು ಸಂವಿಧಾನದ 14 ಮತ್ತು 21ನೇ ವಿಧಿಗಳ ಅಡಿಯಲ್ಲಿ ತನಗೆ ಲಭ್ಯವಿರುವ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಅವರು ಅರ್ಜಿಯಲ್ಲಿ ತಿಳಿಸಿದ್ದಾರೆ.

‘ಪಿಂಚಣಿ ಎಂಬುದು ಸರ್ಕಾರ ನೀಡುವ ದಾನವಲ್ಲ, ಅದು ನೌಕರನ ಹಕ್ಕು. ಇದು ಸಂವಿಧಾನದ 21ನೇ ವಿಧಿಯಡಿ ಬರುವ ಜೀವಿಸುವ ಹಕ್ಕಿನ ಅವಿಭಾಜ್ಯ ಅಂಗವಾಗಿದೆ’ ಎಂದು ವಾದಿಸಿದ್ದಾರೆ.

ಅರ್ಜಿದಾರರು 1970ರ ಜೂನ್ 1ರಿಂದ 1985ರ ಮೇ 28ರವರೆಗೆ ಕೆಲಸ ಮಾಡಿದ್ದರು. ನಂತರ ಅವರು ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ಗೆ (ಗೇಲ್) ಸೇರಿದ್ದರು.

ರಾಜ್ಯ ಸರ್ಕಾರವು ಕೆಲ ನಿಯಮ ಮತ್ತು ನಿಬಂಧನೆಗಳನ್ನು ಉಲ್ಲೇಖಿಸಿ ಪಿಂಚಣಿ ಸೌಲಭ್ಯಗಳನ್ನು ನಿರಾಕರಿಸಿತ್ತು. ಶಂಕರ್ ಅವರು 2017ರಲ್ಲಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಅಲ್ಲಿ ಪ್ರಕರಣ ಬಾಕಿ ಉಳಿದಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.