ನವದೆಹಲಿ: ಬೀದಿನಾಯಿಗಳ ಸ್ಥಳಾಂತರ ಮತ್ತು ಸಂತಾನಹರಣಕ್ಕೆ ಸಂಬಂಧಿಸಿದಂತೆ 2025ರ ನವೆಂಬರ್ 7ರಂದು ನೀಡಿದ್ದ ಆದೇಶವನ್ನು ಮಾರ್ಪಡಿಸುವಂತೆ ಕೋರಿ ಸಲ್ಲಿಸಲಾಗಿದ್ದ ಎಲ್ಲಾ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ.

ಬೀದಿನಾಯಿಗಳಿಗೆ ಸಂಬಂಧಿಸಿದಂತೆ ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿ (AWBI) ಹೊರಡಿಸಿರುವ ಪ್ರಮಾಣಿತ ಕಾರ್ಯಾಚರಣೆ ವಿಧಾನದ (ಎಸ್ಒಪಿ) ಸಿಂಧುತ್ವ ಪ್ರಶ್ನಿಸುವ ಎಲ್ಲಾ ಅರ್ಜಿಗಳನ್ನು ನ್ಯಾಯಾಲಯವು ತಿರಸ್ಕರಿಸಿದೆ. ಜತೆಗೆ, ‘ಕಠಿಣ ವಾಸ್ತವದ ಕಡೆಗೆ ಕಣ್ಣುಮುಚ್ಚಿ ಕುಳಿತುಕೊಳ್ಳಲು ಸಾಧ್ಯವಿಲ್ಲ’ ಎಂದೂ ಪ್ರತಿಪಾದಿಸಿದೆ.

ನಾಯಿಗಳಿಂದ ಯಾವುದೇ ಭೀತಿ ಇಲ್ಲದೆ ಮುಕ್ತವಾಗಿ ಬದುಕುವ ಹಕ್ಕು ಎಂದರೆ ಘನತೆಯಿಂದ ಬದುಕುವುದು ಎಂದರ್ಥ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿಯ ನಿಯಮಾವಳಿ ಚೌಕಟ್ಟನ್ನು ಬಲಪಡಿಸಲು ಮತ್ತು ಜಾರಿಗೊಳಿಸಲು ರಾಜ್ಯ ಸರ್ಕಾರಗಳು ಅಗತ್ಯ ಕ್ರಮ ತೆಗೆದುಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ. ಪ್ರತಿ ಜಿಲ್ಲೆಯಲ್ಲೂ ಕನಿಷ್ಠ ಒಂದು ‘ಪ್ರಾಣಿ ಜನನ ನಿಯಂತ್ರಣ ಕೇಂದ್ರ’ವನ್ನು ಸ್ಥಾಪಿಸುವಂತೆಯೂ ಸೂಚಿಸಿದೆ.

ಜಿಲ್ಲೆಗಳ ಜನಸಂಖ್ಯಾ ಸಾಂದ್ರತೆಯನ್ನು ಗಮನದಲ್ಲಿಟ್ಟುಕೊಂಡು, ಪ್ರಾಣಿ ಜನನ ನಿಯಂತ್ರಣ ಕೇಂದ್ರಗಳನ್ನು ವಿಸ್ತರಿಸಲು ಅಧಿಕಾರಿಗಳು ಅಗತ್ಯ ಕ್ರಮ ತೆಗೆದುಕೊಳ್ಳಬೇಕು ಎಂದು ಕೋರ್ಟ್ ಹೇಳಿದೆ.

ರಾಷ್ಟ್ರೀಯ ಹೆದ್ದಾರಿ ಮತ್ತು ಎಕ್ಸ್ಪ್ರೆಸ್ವೇಗಳಿಂದ ಬೀದಿನಾಯಿಗಳು ಹಾಗೂ ಜಾನುವಾರುಗಳನ್ನು ತೆರವುಗೊಳಿಸುವುದನ್ನು ಖಚಿತಪಡಿಸಿಕೊಳ್ಳುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಕೋರ್ಟ್ ಸೂಚಿಸಿದೆ.

‘ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು, ಬಸ್ ನಿಲ್ದಾಣಗಳು ಮತ್ತು ರೈಲ್ವೆ ನಿಲ್ದಾಣಗಳಲ್ಲಿ ನಾಯಿ ಕಡಿತದ ಘಟನೆಗಳು ಆತಂಕಕಾರಿಯಾಗಿ ಹೆಚ್ಚುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಬೀದಿನಾಯಿಗಳನ್ನು ಗೊತ್ತುಪಡಿಸಿದ ಆಶ್ರಯ ತಾಣಗಳಿಗೆ ಸ್ಥಳಾಂತರಿಸಬೇಕು’ ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿ ಕಳೆದ ವರ್ಷ ಸುಪ್ರೀಂ ಕೋರ್ಟ್ ತೀರ್ಪು ನೀಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.