ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಣ ಅಕ್ರಮ ವರ್ಗಾವಣೆ: ಸತ್ಯೇಂದರ್‌ ಜೈನ್‌ ಮಧ್ಯಂತರ ಜಾಮೀನು ಜ. 8ರವರೆಗೆ ವಿಸ್ತರಣೆ

Published 14 ಡಿಸೆಂಬರ್ 2023, 13:00 IST
Last Updated 14 ಡಿಸೆಂಬರ್ 2023, 13:00 IST
ಅಕ್ಷರ ಗಾತ್ರ

ನವದೆಹಲಿ: ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ದೆಹಲಿಯ ಮಾಜಿ ಸಚಿವ ಸತ್ಯೇಂದರ್‌ ಜೈನ್‌ ಅವರಿಗೆ ನೀಡಿದ್ದ ಮಧ್ಯಂತರ ಜಾಮೀನಿನ ಅವಧಿಯನ್ನು ಸುಪ್ರೀಂಕೋರ್ಟ್‌ ಸೋಮವಾರ ಜನವರಿ 8ರವರೆಗೆ ವಿಸ್ತರಿಸಿದೆ.

ಜಾರಿ ನಿರ್ದೇಶನಾಲಯವು ತನಿಖೆ ನಡೆಸುತ್ತಿರುವ ಪ್ರಕರಣದಲ್ಲಿ ಜಾಮೀನು ನೀಡಬೇಕೆಂದು ಕೋರಿ ಜೈನ್‌ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ದೆಹಲಿ ಹೈಕೋರ್ಟ್‌ ಏ. 6ರಂದು ತಿರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ ಅವರು ಸುಪ್ರೀಂಕೋರ್ಟ್‌ ಮೊರೆ ಹೋಗಿದ್ದಾರೆ. ಜೈನ್‌ ಅವರು ಕಾಲಿನ ಮೂಳೆ ಮುರಿತದಿಂದ ಬಳಲುತ್ತಿದ್ದ ಕಾರಣ ಅವರಿಗೆ ಸುಪ್ರೀಂಕೋರ್ಟ್‌ ಪೀಠವು ಮಧ್ಯಂತರ ಜಾಮೀನನ್ನು ಡಿ. 11ರವರೆಗೆ ವಿಸ್ತರಿಸಿತ್ತು.

ವೈದ್ಯಕೀಯ ವರದಿ ಆಧಾರದ ಮೇಲೆ ಕೋರ್ಟ್ ಮೇ 26ರಂದು ಅವರಿಗೆ ಆರು ವಾರಗಳ ಮಧ್ಯಂತರ ಜಾಮೀನು ನೀಡಿದ್ದು ನಂತರದಲ್ಲಿ ಅದನ್ನು ಕಾಲ ಕಾಲಕ್ಕೆ ವಿಸ್ತರಣೆ ಮಾಡುತ್ತಾ ಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT