ನವದೆಹಲಿ: ಅಸ್ಸಾಂ ಮುಖ್ಯಮಂತ್ರಿ ಹಿಮಂತಾ ಬಿಸ್ವಾ ಶರ್ಮಾ ಹಾಗೂ ಅವರ ಪತ್ನಿ ಹಲವು ಪಾಸ್ಪೋರ್ಟ್ಗಳನ್ನು ಹೊಂದಿದ್ದು, ವಿದೇಶಗಳಲ್ಲಿ ಬಹಿಂಗಪಡಿಸದ ಆಸ್ತಿ ಹೊಂದಿದ್ದಾರೆ ಎನ್ನುವ ಆರೋಪದ ಮೇಲೆ ದಾಖಲಾಗಿರುವ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ಪವನ್ ಖೇರಾ ಅವರಿಗೆ ಸುಪ್ರೀಂಕೋರ್ಟ್ ನಿರೀಕ್ಷಣಾ ಜಾಮೀನು ನೀಡಿದೆ.

ನ್ಯಾಯಮೂರ್ತಿಗಳಾದ ಜೆ.ಕೆ. ಮಾಹೇಶ್ವರಿ, ಅತುಲ್.ಎಸ್. ಚಾಂದೂರ್ಕರ್ ನೇತೃತ್ವದ ನ್ಯಾಯಪೀಠ, ರಾಜಕೀಯ ದ್ವೇಷದ ವಿಚಾರಣೆಯಿಂದ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಧಕ್ಕೆಯಾಗದಂತೆ ಕ್ರಿಮಿನಲ್ ಪ್ರಕರಣವನ್ನು ವಸ್ತುನಿಷ್ಠತೆ ಹಾಗೂ ಜಾಗರೂಕತೆಯಿಂದ ನಡೆಸಬೇಕು’ ಎಂದು ತಿಳಿಸಿ ಜಾಮೀನು ಮಂಜೂರು ಮಾಡಿದೆ.

‘ಈ ಪ್ರಕರಣದಲ್ಲಿ ರಾಜಕೀಯ ಪ್ರೇರಿತ ಆರೋಪ–ಪ್ರತ್ಯಾರೋಪ ನಡೆದಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ವಶಕ್ಕೆ ಪಡೆದು ವಿಚಾರಣೆ ಒಳಪಡಿಸುವುದನ್ನು ಬಹಿರಂಗಪಡಿಸುವ ಬದಲಾಗಿ ಆರೋಪಗಳ ಸತ್ಯಾಸತ್ಯತೆಯನ್ನು ವಿಚಾರಣೆ ವೇಳೆ ಕೂಡ ನಡೆಸಬಹುದು. ವೈಯಕ್ತಿಕ ಸ್ವಾತಂತ್ರ್ಯ ಎಂಬುದು ಪಾಲಿಸಬೇಕಾದ ಮೂಲಭೂತ ಹಕ್ಕು ಆಗಿದೆ’ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಪೊಲೀಸರ ತನಿಖೆಗೆ ಸಹಕರಿಸುವಂತೆ ಖೇರಾ ಅವರಿಗೆ ತಿಳಿಸಿದ ನ್ಯಾಯಾಲಯ, ಅಗತ್ಯಬಿದ್ದರೆ ಪೊಲೀಸ್ ಠಾಣೆಗೂ ತೆರಳಬೇಕು ಎಂದು ತಿಳಿಸಿದೆ. ಸಕ್ಷಮ ನ್ಯಾಯಾಲಯದ ಪೂರ್ವಾನುಮತಿಯಿಲ್ಲದೇ, ದೇಶ ಬಿಟ್ಟು ತೆರಳುವಂತಿಲ್ಲ ಎಂದು ಸುಪ್ರೀಂಕೋರ್ಟ್ ಸ್ಪಷ್ಟಪಡಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.