ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಣ ಅಕ್ರಮ ವರ್ಗಾವಣೆ ಪ್ರಕರಣ: ಎನ್‌ಸಿಪಿ ನಾಯಕ ನವಾಬ್‌ ಮಲಿಕ್‌ಗೆ ಜಾಮೀನು ಮಂಜೂರು

Published 11 ಆಗಸ್ಟ್ 2023, 11:03 IST
Last Updated 11 ಆಗಸ್ಟ್ 2023, 11:03 IST
ಅಕ್ಷರ ಗಾತ್ರ

ನವದೆಹಲಿ: ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಎನ್‌ಸಿಪಿ ಮುಖಂಡ ನವಾಬ್‌ ಮಲಿಕ್‌ ಅವರಿಗೆ ಎರಡು ತಿಂಗಳ ಅವಧಿಗೆ ಸುಪ್ರೀಂ ಕೋರ್ಟ್ ಇಂದು (ಶುಕ್ರವಾರ) ಜಾಮೀನು ಮಂಜೂರು ಮಾಡಿದೆ.

ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್ ಮತ್ತು ಬೇಲಾ ಎಂ. ತ್ರಿವೇದಿ ಅವರನ್ನು ಒಳಗೊಂಡ ಪೀಠವು‌ ಅರ್ಜಿ ವಿಚಾರಣೆ ನಡೆಸಿ, ಆದೇಶ ಹೊರಡಿಸಿದೆ.

ನವಾಬ್‌ ಮಲಿಕ್‌ ಮೂತ್ರಪಿಂಡ ಸಮಸ್ಯೆ ಸೇರಿದಂತೆ ಇತರ ಕಾಯಿಲೆಗಳಿಂದ ಬಳಲುತ್ತಿದ್ದು, ಪ್ರಸ್ತುತ ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜಾರಿ ನಿರ್ದೇಶನಾಲಯ (ಇ.ಡಿ) ತನಿಖೆ ನಡೆಸುತ್ತಿರುವ ಪ್ರಕರಣದಲ್ಲಿ ವೈದ್ಯಕೀಯ ಕಾರಣಗಳಿಗಾಗಿ ಜಾಮೀನು ನೀಡುವಂತೆ ಕೋರಿ ಬಾಂಬೆ ಹೈಕೋರ್ಟ್ ಮೊರೆ ಹೋಗಿದ್ದರು. ಆದರೆ, ಜುಲೈ 13 ರಂದು ಪ್ರಕರಣ ವಿಚಾರಣೆ ನಡೆಸಿದ ಕೋರ್ಟ್‌ ಜಾಮೀನು ಅರ್ಜಿಯ ತುರ್ತು ವಿಚಾರಣೆ ನಡೆಸಲು ನಿರಾಕರಿಸಿತ್ತು.

ಬಳಿಕ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್‌ಎ) ಅಡಿಯಲ್ಲಿ ತಮ್ಮನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಮಲಿಕ್‌ ಅವರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.

ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸಹೋದರಿ ಹಸೀನಾ ಪಾರ್ಕರ್‌ ಅವರೊಂದಿಗೆ ಆಸ್ತಿ ವ್ಯವಹಾರಗಳಲ್ಲಿ ಶಾಮೀಲಾಗಿರುವ ಆರೋಪದಲ್ಲಿ ಮಲಿಕ್‌ ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT