ಶನಿವಾರ, 14 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಭೀಮಾ ಕೊರೆಗಾಂವ್‌ ಪ್ರಕರಣ: ಸಾಮಾಜಿಕ ಹೋರಾಟಗಾರ ವರವರ ರಾವ್‌ಗೆ ಜಾಮೀನು 

ನವದೆಹಲಿ: ಭೀಮಾ ಕೊರೆಗಾಂವ್‌ ಪ್ರಕರಣದ ಆರೋಪಿ, ಸಾಮಾಜಿಕ ಹೋರಾಟಗಾರ ಪಿ.ವರವರ ರಾವ್‌ ಅವರಿಗೆ ಬುಧವಾರ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಕಾಯಂ ಜಾಮೀನು ಕೋರಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ತಿರಸ್ಕರಿಸಿತ್ತು. ಅದನ್ನು ಪ್ರಶ್ನಿಸಿ ರಾವ್ ‘ಸುಪ್ರೀಂ’ಗೆ ಮೇಲ್ಮನವಿ ಸಲ್ಲಿಸಿದ್ದರು.

ವೈದ್ಯಕೀಯ ಜಾಮೀನು ಪಡೆದಿದ್ದ ರಾವ್ ಅವರು ಪೆಬ್ರುವರಿ 23ರಂದು ಶರಣಾಗಿದ್ದರು. ಜತೆಗೆ ವೈದ್ಯಕೀಯ ಆಧಾರದಲ್ಲಿ ಶಾಶ್ವತ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.

2018ರ ನವೆಂಬರ್‌ನಲ್ಲಿ ವರವರ ರಾವ್‌ ಅವರನ್ನು ಮಹಾರಾಷ್ಟ್ರ ಪೊಲೀಸರು ಬಂಧಿಸಿದ್ದರು.

ಭೀಮಾ–ಕೋರೆಗಾಂವ್‌ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಮತ್ತು ಪ್ರಧಾನಿ ನರೇಂದ್ರ ಮೋದಿ ಹತ್ಯೆಗೆ ಸಂಚು ರೂಪಿಸಿದ ಆರೋಪದಲ್ಲಿ ಅವರನ್ನು ಗೃಹ ಬಂಧನಕ್ಕೆ ಒಪ್ಪಿಸಲಾಗಿತ್ತು.

ಓದಿ...

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT