ನವದೆಹಲಿ: ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎಸ್. ರವೀಂದ್ರ ಭಟ್ ಅವರು ಶುಕ್ರವಾರ ಸೇವೆಯಿಂದ ನಿವೃತ್ತಿಯಾದರು. 2019ರ ಸೆಪ್ಟೆಂಬರ್ 23ರಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ಬಡ್ತಿ ಪಡೆದಿದ್ದ ಭಟ್ ಅವರು, ನಾಲ್ಕು ವರ್ಷ ಸೇವೆ ಸಲ್ಲಿಸಿದ್ದರು.
ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದ ನ್ಯಾ. ಸಂಜಯ್ ಕೃಷ್ಣ ಕೌಲ್, ಭಟ್ ಅವರು ತಮ್ಮ ನಿಖರ ಮತ್ತು ಸಂಕ್ಷಿಪ್ತ ತೀರ್ಪುಗಳ ಮೂಲಕ ನ್ಯಾಯಾಂಗಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ವಿಶೇಷವಾಗಿ ಸಾಂವಿಧಾನಿಕ ವಿಚಾರಗಳಲ್ಲಿ ಅವರು ಉತ್ತಮ ಕೊಡುಗೆ ಶ್ಲಾಘನೀಯವಾಗಿದೆ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.