ನವದೆಹಲಿ: ಸುಪ್ರೀಂ ಕೋರ್ಟ್ನ ನ್ಯಾಯಮೂರ್ತಿಗಳಾಗಿ ಮೂವರು ಶುಕ್ರವಾರ ಪ್ರಮಾಣ ವಚನ ಸ್ವೀಕರಿಸಿದರು.

ನ್ಯಾಯಮೂರ್ತಿಗಳಾದ ಎನ್.ವಿ. ಅಂಜಾರಿಯಾ, ವಿಜಯ್ ಬಿಷ್ಣೋಯ್ ಮತ್ತು ಎ.ಎಸ್. ಚಂದೂರ್ಕರ್ ಅವರಿಗೆ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಪ್ರಮಾಣ ವಚನ ಬೋಧಿಸಿದರು.
.ಸೈದ್ಧಾಂತಿಕ ವಿಚಾರಕ್ಕಾಗಿ ಯಾರನ್ನಾದರೂ ಜೈಲಿಗೆ ಹಾಕಲು ಆಗುವುದಿಲ್ಲ: ಸುಪ್ರೀಂ.
ಸುಪ್ರೀಂ ಕೋರ್ಟ್ ಆವರಣದಲ್ಲಿ ಪ್ರಮಾಣ ವಚನ ಸಮಾರಂಭ ನಡೆಯಿತು.

ಇದರೊಂದಿಗೆ ಸಿಜೆಐ ಸೇರಿದಂತೆ ಸುಪ್ರೀಂ ಕೋರ್ಟ್ನಲ್ಲಿ 34 ನ್ಯಾಯಾಧೀಶರ ಪೂರ್ಣ ಬಲ ಮರಳಿ ಬಂದಂತಾಗಿದೆ.

ಸುಪ್ರೀಂ ಕೋರ್ಟ್ ಕೊಲಿಜಿಯಂ ಸೋಮವಾರ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಂಜಾರಿಯಾ, ಗುವಾಹಟಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿಷ್ಣೋಯ್ ಮತ್ತು ಬಾಂಬೆ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಚಂಡೂರ್ಕರ್ ಅವರನ್ನು ಸುಪ್ರೀಂ ಕೋರ್ಟ್ನ ನ್ಯಾಯಾಧೀಶರನ್ನಾಗಿ ನೇಮಕ ಮಾಡಲು ಶಿಫಾರಸು ಮಾಡಿತ್ತು.
.ಸಲಿಂಗ ವಿವಾಹ ಅಸಿಂಧು: ಸುಪ್ರೀಂ ಕೋರ್ಟ್ ತೀರ್ಪು ಸ್ವಾಗತಿಸಿದ ವಿಎಚ್ಪಿ.
ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ನೇಮಕಾತಿಯನ್ನು ಸಾಮಾಜಿಕ ಜಾಲತಾಣದಲ್ಲಿ ಘೋಷಣೆ ಮಾಡಿದ್ದರು.

ಮಾಜಿ ಸಿಜೆಐ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿಗಳಾದ ಅಭಯ್ ಎಸ್. ಓಕಾ ಮತ್ತು ಹೃಷಿಕೇಶ್ ರಾಯ್ ಅವರ ನಿವೃತ್ತಿಯ ನಂತರ ಸುಪ್ರೀಂ ಕೋರ್ಟ್ನಲ್ಲಿ ಖಾಲಿ ಇರುವ ಮೂರು ನ್ಯಾಯಾಧೀಶರ ಹುದ್ದೆಗಳಿಗೆ ಅವರ ಹೆಸರುಗಳನ್ನು ಶಿಫಾರಸು ಮಾಡಲಾಗಿತ್ತು.

ನ್ಯಾಯಮೂರ್ತಿ ಅಂಜಾರಿಯಾ ಅವರು 2024ರ ಫೆಬ್ರುವರಿ 25ರಂದು ಕರ್ನಾಟಕ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.
.ಮಗಳ ಮೇಲೆ ಲೈಂಗಿಕ ದೌರ್ಜನ್ಯ: ಶಿಕ್ಷೆ ಅಮಾನತು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.