ನವದೆಹಲಿ: ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ಸಂಖ್ಯೆಯನ್ನು 33ರಿಂದ 37ಕ್ಕೆ (ಭಾರತದ ಮುಖ್ಯ ನ್ಯಾಯಮೂರ್ತಿಯನ್ನು ಹೊರತುಪಡಿಸಿ) ತ್ವರಿತವಾಗಿ ಹೆಚ್ಚಿಸಲು ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿದೆ.

ಈ ಕುರಿತು ಸಂಸತ್ತಿನಲ್ಲಿ ಮಸೂದೆ ಮಂಡಿಸಲು ಕೇಂದ್ರ ಸಚಿವ ಸಂಪುಟ ಮೇ 5ರಂದು ನಿರ್ಧಾರ ತೆಗೆದುಕೊಂಡಿತ್ತು. ಅದರ ಬೆನ್ನಲ್ಲೇ ಸುಗ್ರೀವಾಜ್ಞೆ ಹೊರಡಿಸಲಾಗಿದೆ.

‘ಸುಪ್ರೀಂ ಕೋರ್ಟ್ (ನ್ಯಾಯಮೂರ್ತಿಗಳ ಸಂಖ್ಯೆ) ತಿದ್ದುಪಡಿ ಸುಗ್ರೀವಾಜ್ಞೆ–2026’ಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶನಿವಾರ ಸಹಿ ಮಾಡಿದ್ದಾರೆ.

ಆದಾಗ್ಯೂ, ಆರು ತಿಂಗಳೊಳಗೆ ಈ ಸುಗ್ರೀವಾಜ್ಞೆ ಸಂಸತ್ತಿನಲ್ಲಿ ಅಂಗೀಕಾರ ಪಡೆಯಬೇಕು. ಇಲ್ಲದಿದ್ದರೆ ಅದು ರದ್ದಾಗುತ್ತದೆ. ಜುಲೈನಲ್ಲಿ ಮಳೆಗಾಲದ ಅಧಿವೇಶನ ನಡೆಯುವ ಸಾಧ್ಯತೆಯಿದೆ. ಆದರೆ, ಈ ಸುಗ್ರೀವಾಜ್ಞೆಯನ್ನು ತುರ್ತಾಗಿ ತರುವ ಅಗತ್ಯವೇನಿತ್ತು ಎಂಬುದು ಸ್ಪಷ್ಟವಾಗಿಲ್ಲ.

ನ್ಯಾಯಮೂರ್ತಿಗಳ ಸಂಖ್ಯೆಯ ಹೆಚ್ಚಳವು ತ್ವರಿತ ಮತ್ತು ಪರಿಣಾಮಕಾರಿ ನ್ಯಾಯವನ್ನು ಖಾತರಿಪಡಿಸುತ್ತದೆ ಎಂದು ಸರ್ಕಾರ ಈ ಹಿಂದೆ ಹೇಳಿತ್ತು.

ಸಂವಿಧಾನವು ಒಬ್ಬ ಮುಖ್ಯ ನ್ಯಾಯಮೂರ್ತಿ ಮತ್ತು ಇತರ ಏಳು ನ್ಯಾಯಮೂರ್ತಿಗಳಿಗೆ ಅವಕಾಶ ನೀಡಿದ್ದರೂ, ‘ಸುಪ್ರೀಂ ಕೋರ್ಟ್ (ನ್ಯಾಯಮೂರ್ತಿಗಳ ಸಂಖ್ಯೆ) ಕಾಯ್ದೆ–1956’ ನ್ಯಾಯಮೂರ್ತಿಗಳ ಸಂಖ್ಯೆಯನ್ನು 10ಕ್ಕೇರಿಸಲು ಅವಕಾಶ ಮಾಡಿಕೊಟ್ಟಿತು. ಈ ಕಾಯ್ದೆಗೆ ಹಲವು ಬಾರಿ ತಿದ್ದುಪಡಿಗಳಾಗಿದ್ದು, 1960ರಲ್ಲಿ ನ್ಯಾಯಮೂರ್ತಿಗಳ ಸಂಖ್ಯೆ 13ಕ್ಕೆ, 1977ರಲ್ಲಿ 17ಕ್ಕೆ, 1986ರಲ್ಲಿ 25ಕ್ಕೆ, 2008ರಲ್ಲಿ 30ಕ್ಕೆ ಹಾಗೂ 2019ರಲ್ಲಿ ತಿದ್ದುಪಡಿ ಮೂಲಕ ನ್ಯಾಯಮೂರ್ತಿಗಳ ಸಂಖ್ಯೆಯನ್ನು 33ಕ್ಕೆ ಹೆಚ್ಚಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.