ನವದೆಹಲಿ: ಪಾರದರ್ಶಕತೆ ಉದ್ದೇಶದಿಂದ ತಮ್ಮ ಆಸ್ತಿ ವಿವರಗಳನ್ನು ಸುಪ್ರೀಂ ಕೋರ್ಟ್ನ ವೆಬ್ಸೈಟ್ನಲ್ಲಿ ಪ್ರಕಟಿಸಲು ನ್ಯಾಯಮೂರ್ತಿಗಳ ಸಭೆಯಲ್ಲಿ ನಿರ್ಧರಿಸಲಾಗಿದೆ.

‘ನ್ಯಾಯಮೂರ್ತಿಗಳು ತಮ್ಮ ಆಸ್ತಿ ವಿವರಗಳನ್ನು ವೆಬ್ಸೈಟ್ನಲ್ಲಿ ಬಹಿರಂಗಪಡಿಸಬೇಕು. ಆದರೆ, ಇದು ಕಡ್ಡಾಯವಲ್ಲ. ಇದು ಸಂಪೂರ್ಣವಾಗಿ ಸ್ವಯಂಪ್ರೇರಿತ ಪ್ರಕ್ರಿಯೆಯಾಗಿರಲಿದೆ. ಆದರೆ, ಆಸ್ತಿ ಕುರಿತು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯು ವಿವರ ಕೇಳಿದಾಗ ನೀಡಲೇಬೇಕಾಗುತ್ತದೆ’ ಎಂದು ಸಭೆಯಲ್ಲಿ ನಿರ್ಧರಿಸಲಾಗಿದೆ.

ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಸೇರಿದಂತೆ 30 ನ್ಯಾಯಮೂರ್ತಿಗಳು ಈವರೆಗೆ ತಮ್ಮ ಆಸ್ತಿ ವಿವರಗಳನ್ನು ವೆಬ್ಸೈಟ್ನಲ್ಲಿ ಪ್ರಕಟಿಸಿದ್ದಾರೆ. ಇನ್ನುಮುಂದೆ ನ್ಯಾಯಮೂರ್ತಿಗಳು ಅಧಿಕಾರ ವಹಿಸಿಕೊಳ್ಳುವ ಸಂದರ್ಭದಲ್ಲಿ ಈ ಮಾಹಿತಿ ನೀಡಬೇಕಾಗುತ್ತದೆ. ಇತ್ತೀಚೆಗೆ ದೆಹಲಿ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ಮನೆಯಲ್ಲಿ ಬೆಂಕಿ ನಂದಿಸುವ ವೇಳೆ ದೊಡ್ಡ ಮೊತ್ತದ ಹಣ ಪತ್ತೆಯಾಗಿತ್ತು. ಇದು ದೊಡ್ಡ ವಿವಾದವನ್ನೇ ಸೃಷ್ಟಿಸಿತ್ತು.
.ಪಕ್ಷಾಂತರ ಮಾಡಿದರೂ ಉಪಚುನಾವಣೆ ನಡೆಯದು: ತೆಲಂಗಾಣ CM ಮಾತಿಗೆ ‘ಸುಪ್ರೀಂ’ ಕಿಡಿ.ಸಾಬರಮತಿ ಆಶ್ರಮ ಅಭಿವೃದ್ಧಿ ವಿರೋಧಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.