ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣ ಸಂಬಂಧ ಆರ್ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಹಾಗೂ ಅವರ ಕುಟುಂಬ ಸದಸ್ಯರ ಮೇಲೆ ಸಿಬಿಐ ದಾಖಲಿಸಿರುವ ಎಫ್ಐಆರ್ ರದ್ದು ಮಾಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
.ಉದ್ಯೋಗಕ್ಕಾಗಿ ಭೂಮಿ ಹಗರಣ: ಲಾಲೂ, ರಾಬ್ಡಿ ವಿರುದ್ಧ ದೋಷಾರೋಪ.
ನ್ಯಾಯಮೂರ್ತಿಗಳಾದ ಎಂ. ಎಂ. ಸುಂದರೇಶ್ ಮತ್ತು ಎನ್. ಕೋಟೀಶ್ವರ್ ಸಿಂಗ್ ಅವರಿದ್ದ ಪೀಠವು, ಕೆಳ ನ್ಯಾಯಾಲಯದ ವೇಳೆ ವಿಚಾರಣೆಗೆ ಖುದ್ದು ಹಾಜರಾಗುವುದರಿಂದ 77 ವರ್ಷದ ಬಿಹಾರದ ಮಾಜಿ ಮುಖ್ಯಮಂತ್ರಿಗೆ ವಿನಾಯಿತಿ ನೀಡಿದೆ.

ಈ ಪ್ರಕರಣದಲ್ಲಿ ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 17A ಅನ್ವಯದ ಬಗ್ಗೆ ಪ್ರಶ್ನಿಸಲು ಇದೇ ವೇಳೆ ಕೋರ್ಟ್ ಅನುಮತಿ ನೀಡಿದೆ.

ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 17A ಅಡಿಯಲ್ಲಿ ದೂರು ದಾಖಲಿಸಲು ಪೂರ್ವನುಮತಿ ಪಡೆಯದ ಕಾರಣ ಎಫ್ಐಆರ್ ತಿರಸ್ಕರಿಸಬೇಕು ಎಂದು ಲಾಲೂ ವಾದಿಸಿದ್ದರು. ಮಾರ್ಚ್ 24ರಂದು ಈ ವಾದವನ್ನು ದೆಹಲಿ ಹೈಕೋರ್ಟ್ ಕೂಡ ತಿರಸ್ಕರಿಸಿತ್ತು.
.ಸಂಕ್ರಾಂತಿ ಹಬ್ಬ: ಪಕ್ಷದಿಂದ ಉಚ್ಚಾಟನೆಗೊಂಡಿದ್ದ ಮಗನ ಮನೆಗೆ ಲಾಲೂ ಪ್ರಸಾದ್ ಭೇಟಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.