ನವದೆಹಲಿ:‘ಯಾವುದೇ ರಾಜ್ಯದ ಮುಖ್ಯಮಂತ್ರಿಯೊಬ್ಬರು ತನಿಖೆಯೊಂದರಲ್ಲಿ ಹಸ್ತಕ್ಷೇಪ ಮಾಡುವಂತಿಲ್ಲ ಹಾಗೂ ಇಂತಹ ನಡೆಗಳಿಂದ ಪ್ರಜಾತಂತ್ರ ವ್ಯವಸ್ಥೆಯನ್ನು ಗಂಡಾಂತರಕ್ಕೆ ನೂಕಬಾರದು’ ಎಂದು ಹೇಳುವ ಮೂಲಕ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಸುಪ್ರೀಂ ಕೋರ್ಟ್ ಬುಧವಾರ ಚಾಟಿ ಬೀಸಿದೆ.

ಚುನಾವಣಾ ಸಲಹಾಸಂಸ್ಥೆ ಐ–ಪ್ಯಾಕ್ನ ಕೋಲ್ಕತ್ತ ಕಚೇರಿಯಲ್ಲಿ ಶೋಧ ಕೈಗೊಂಡಿದ್ದ ವೇಳೆ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತನಿಖೆಯಲ್ಲಿ ಹಸ್ತಕ್ಷೇಪ ಮಾಡಿದ್ದಾಗಿ ಆರೋಪಿಸಿ ಅವರ ವಿರುದ್ಧ ಎಫ್ಐಆರ್ ದಾಖಲಿಸಲು ಆದೇಶಿಸುವಂತೆ ಕೋರಿ ಜಾರಿ ನಿರ್ದೇಶನಾಲಯವು(ಇ.ಡಿ) ಸಲ್ಲಿಸಿರುವ ಅರ್ಜಿ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಈ ಮಾತು ಹೇಳಿದೆ.

ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಪ್ರಶಾಂತ್ ಕುಮಾರ್ ಮಿಶ್ರಾ ಹಾಗೂ ಎನ್.ವಿ.ಅಂಜಾರಿಯಾ ಅವರು ಇದ್ದ ನ್ಯಾಯಪೀಠ, ‘ಕೇಂದ್ರೀಯ ತನಿಖಾ ಸಂಸ್ಥೆಯೊಂದು ಕೈಗೊಂಡಿರುವ ತನಿಖೆಯಲ್ಲಿ ಮುಖ್ಯಮಂತ್ರಿ ಹಸ್ತಕ್ಷೇಪ ಮಾಡಕೂಡದು ಹಾಗೂ ಇದು ಕೇಂದ್ರ ಮತ್ತು ರಾಜ್ಯದ ನಡುವಿನ ವಿವಾದವೆಂದು ಹೇಳಿಕೊಳ್ಳಬಾರದು’ ಎಂದು ಕಟುವಾಗಿ ಹೇಳಿದೆ.

‘ನ್ಯಾಯಪೀಠದ ಮುಂದಿರುವ ಪ್ರಕರಣವು ‘ರಾಮ ಮತ್ತು ಶ್ಯಾಮ’ ಎಂಬುವವರ ನಡುವಿನ ಸಾಮಾನ್ಯ ವಿವಾದವೇನಲ್ಲ. ಪಶ್ಚಿಮ ಬಂಗಾಳದಲ್ಲಿ ಭಿನ್ನ ಸ್ವರೂಪದ ಅಸಾಧಾರಣ ಸನ್ನಿವೇಶ ಇರುವುದನ್ನು ಇದು ತೋರಿಸುತ್ತದೆ’ ಎಂದಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-51-842328700

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.