ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಿಕ್ಷುಕರಿಗೆ ಪುನರ್ವಸತಿ, ಲಸಿಕೆ ನೀಡುವಂತೆ ಅರ್ಜಿ: ಕೇಂದ್ರಕ್ಕೆ ಸುಪ್ರೀಂ ನೋಟಿಸ್

Last Updated 27 ಜುಲೈ 2021, 8:51 IST
ಅಕ್ಷರ ಗಾತ್ರ

ನವದೆಹಲಿ: ಕೋವಿಡ್‌–19 ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಭಿಕ್ಷುಕರು ಮತ್ತು ಅಲೆಮಾರಿಗಳಿಗೆ ಕೋವಿಡ್‌ ಲಸಿಕೆ ಮತ್ತು ಪುನರ್ವಸತಿ ಕಲ್ಪಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ಬಗ್ಗೆ ಪ್ರತಿಕ್ರಿಯಿಸುವಂತೆ ಕೇಂದ್ರ ಮತ್ತು ದೆಹಲಿ ಸರ್ಕಾರಕ್ಕೆ ಸುಪ್ರೀಂಕೋರ್ಟ್‌ ಮಂಗಳವಾರ ಸೂಚಿಸಿದೆ.

ಈ ಸಂಬಂಧ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಡಿ.ವೈ ಚಂದ್ರಚೂಡ್‌ ಮತ್ತು ಎಂ.ಆರ್‌ ಶಾ ಅವರ ಪೀಠವು.‘ ಶಿಕ್ಷಣ ಮತ್ತು ಉದ್ಯೋಗದ ಕೊರತೆಯಿಂದಾಗಿ ಕೆಲವರು ಭಿಕ್ಷೆಗಾಗಿ ರಸ್ತೆಗಿಳಿಯುತ್ತಾರೆ .ಇದು ಸಾಮಾಜಿಕ ಮತ್ತು ಆರ್ಥಿಕ ಸಮಸ್ಯೆಯಾಗಿದೆ. ಹಾಗಾಗಿ ಯಾವುದೇ ಭಿಕ್ಷುಕರು ರಸ್ತೆಗೆ ಇಳಿಯದಂತೆ ನಿರ್ಬಂಧಿಸಿ ಎಂದು ಆದೇಶಿಸಲು ಸಾಧ್ಯವಿಲ್ಲ ಎಂದು ಪೀಠ ಹೇಳಿದೆ.

ಅಲ್ಲದೆ, ಈ ವಿಷಯದಲ್ಲಿ ಏನು ಮಾಡಬಹುದು ಎಂದು ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ ಅವರು ಸಲಹೆ ಮಾಡಬಹುದು ಎಂದ ಪೀಠವು, ಈ ಬಗ್ಗೆ ‍ಎರಡು ವಾರಗಳೊಳಗೆ ಪ್ರತಿಕ್ರಿಯಿಸುವಂತೆ ಕೇಂದ್ರ ಮತ್ತು ದೆಹಲಿ ಸರ್ಕಾರಕ್ಕೆ ನ್ಯಾಯಾಲಯವು ಸೂಚಿಸಿದೆ.

ಕೋವಿಡ್‌ ಸಾಂಕ್ರಾಮಿಕದ ಈ ಸಂದರ್ಭದಲ್ಲಿ ಭಿಕ್ಷುಕರು ಮತ್ತು ಅಲೆಮಾರಿಗಳಿಗಾಗಿ ವಸತಿ, ಆಹಾರವನ್ನು ಒದಗಿಸಬೇಕು. ಲಸಿಕೆಯನ್ನು ನೀಡಬೇಕು ಎಂದು ಕೋರಿ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT