ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಗ್ಯಾನವಾಪಿ ವಿವಾದ: ಹಿಂದೂಗಳ ಪ್ರಾರ್ಥನೆ ತಡೆಗೆ ಸುಪ್ರೀಂ ಕೋರ್ಟ್ ನಕಾರ

ಕಾಶಿ ವಿಶ್ವನಾಥ ದೇಗುಲ ಟ್ರಸ್ಟಿಗಳಿಗೆ ನೋಟಿಸ್; ಯಥಾಸ್ಥಿತಿ ಕಾಯ್ದುಕೊಳ್ಳಲು ಸೂಚನೆ
Published 1 ಏಪ್ರಿಲ್ 2024, 14:09 IST
Last Updated 1 ಏಪ್ರಿಲ್ 2024, 14:09 IST
ಅಕ್ಷರ ಗಾತ್ರ

ನವದೆಹಲಿ: ಗ್ಯಾನವಾಪಿ ಸಂಕೀರ್ಣದ ದಕ್ಷಿಣ ಭಾಗದ ನೆಲಮಾಳಿಗೆಯಲ್ಲಿ ಹಿಂದೂಗಳು ಪ್ರಾರ್ಥನೆ ಸಲ್ಲಿಸಿರುವುದಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿತು. ಮಸೀದಿ ವ್ಯವಸ್ಥಾಪನಾ ಸಮಿತಿಯು ಸಲ್ಲಿಸಿರುವ ಅರ್ಜಿಗೆ ಪ್ರತಿಕ್ರಿಯೆ ನೀಡುವಂತೆ ಕಾಶಿ ವಿಶ್ವನಾಥ ದೇವಸ್ಥಾನದ ಟ್ರಸ್ಟಿಗಳಿಗೆ ಸೂಚಿಸಿತು.

ಗ್ಯಾನವಾಪಿ ಮಸೀದಿ ಸಂಕೀರ್ಣದ ‘ವ್ಯಾಸ ತೆಹಖಾನಾ’ದಲ್ಲಿ ಪೂಜೆ ಸಲ್ಲಿಸಲು ಹಿಂದೂ ಧರ್ಮೀಯರಿಗೆ ಅವಕಾಶ ನೀಡಿ ಕೆಳಹಂತದ ನ್ಯಾಯಾಲಯವೊಂದು ನೀಡಿರುವ ತೀರ್ಪನ್ನು ಅಲಹಾಬಾದ್‌ ಹೈಕೋರ್ಟ್‌ ಎತ್ತಿಹಿಡಿದಿರುವುದನ್ನು ಪ್ರಶ್ನಿಸಿ ಮಸೀದಿ ನಿರ್ವಹಣಾ ಸಮಿತಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಸೋಮವಾರ ನಡೆಸಿತು.

ಸಂಕೀರ್ಣದಲ್ಲಿ ಮುಸ್ಲಿಮರು ನಮಾಜ್ ಕೂಡ ಸಲ್ಲಿಸುತ್ತಿದ್ದು, ಈ ವಿಷಯದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸುಪ್ರೀಂ ಕೋರ್ಟ್‌ ಆದೇಶಿಸಿತು. 

ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಹಾಗೂ ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದೀವಾಲ, ಮನೋಜ್ ಮಿಶ್ರ ಅವರನ್ನು ಒಳಗೊಂಡ ಪೀಠವು ಅರ್ಜಿಯ

ಪ್ರಕರಣದ ವಿಚಾರಣೆ ನಡೆಸಿತು. 

ಮಸೀದಿ ಸಮಿತಿಯು ಹಿಂದೂಗಳು ಪ್ರಾರ್ಥನೆ ಸಲ್ಲಿಸುವುದಕ್ಕೆ ತಡೆಯೊಡ್ಡುವಂತೆ ಸಲ್ಲಿಸಿದ ಅರ್ಜಿಯನ್ನು ಫೆಬ್ರುವರಿ 26ರಂದು ಹೈಕೋರ್ಟ್‌ ತಿರಸ್ಕರಿಸಿತ್ತು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT