ನವದೆಹಲಿ: ವೀರಶೈವ ಜಂಗಮರು ಬೇಡ ಜಂಗಮರಲ್ಲ ಎಂದು ಹೈಕೋರ್ಟ್ ನೀಡಿದ್ದ ತೀರ್ಪು ಪ್ರಶ್ನಿಸಿ ಸಲ್ಲಿಸಲಾದ ಮೇಲ್ಮನವಿ ಅರ್ಜಿ ಸಂಬಂಧ ಕರ್ನಾಟಕ ಸರ್ಕಾರ ಹಾಗೂ ಇತರರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ನೋಟಿಸ್ ಜಾರಿ ಮಾಡಿದೆ.

‘ಲಿಂಗಾಯತ ಸಮುದಾಯದ ಜಂಗಮರೇ ಬೇರೆ, ಬುಡ್ಗ ಅಥವಾ ಬೇಡ ಜಂಗಮರೇ ಬೇರೆ’ ಎಂದು 2025ರ ಜೂನ್ 30ರಂದು ಸ್ಪಷ್ಟಪಡಿಸಿದ್ದ ಹೈಕೋರ್ಟ್, ‘ವೀರಶೈವ ಜಂಗಮರು ಬೇಡ ಅಥವಾ ಬುಡ್ಗ ಜಂಗಮರಲ್ಲ’ ಎಂದು ಮಹತ್ವದ ತೀರ್ಪು ನೀಡಿತ್ತು.

ಈ ಸಂಬಂಧ ರಾಜ್ಯ ಸಮಾಜ ಕಲ್ಯಾಣ ಇಲಾಖೆ, ಬೀದರ್ನ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಮಾರುತಿ ಬೌದ್ಧೆ ಹಾಗೂ ಬೀದರ್ನ ರಾಘವೇಂದ್ರ ಕಾಲೋನಿಯ ರವೀಂದ್ರ ಸ್ವಾಮಿ ಸಲ್ಲಿಸಿದ್ದ ರಿಟ್ ಮೇಲ್ಮನವಿಗಳಲ್ಲಿ ಈ ಕುರಿತಂತೆ ಆದೇಶ ಹೊರಡಿಸಿತ್ತು.

‘ವೀರಶೈವ ಸಮುದಾಯದ ಜಂಗಮರು ಪುರೋಹಿತ ವರ್ಗಕ್ಕೆ ಸೇರಿದವರು ಮತ್ತು ಇವರೆಲ್ಲಾ ಸಸ್ಯಾಹಾರಿಗಳು. ಆದರೆ, ಬೇಡ ಜಂಗಮರನ್ನು ಅಸ್ಪಶ್ಯರೆಂದು ಪರಿಗಣಿಸಲಾಗುತ್ತದೆ’ ಎಂಬ ಅಂಶವನ್ನು ಪೀಠ ದಾಖಲಿಸಿತ್ತು.

‘ಜಾತಿ ಹೆಸರು ಒಂದೇ ರೀತಿ ಇದೆ ಎನ್ನುವ ಕಾರಣಕ್ಕಾಗಿ ಆ ಜಾತಿಗಳಿಗೆ ಪರಿಶಿಷ್ಟ ಜಾತಿಗಳ ಸ್ಥಾನಮಾನ ನೀಡಲಾಗದು ಎಂದು ಸುಪ್ರೀಂ ಕೋರ್ಟ್ ಈಗಾಗಲೇ ಪ್ರಭುದೇವ ಮಲ್ಲಿಕಾರ್ಜುನಯ್ಯ ವರ್ಸಸ್ ರಾಮಚಂದ್ರ ವೀರಪ್ಪ ಪ್ರಕರಣದಲ್ಲಿ ತೀರ್ಮಾನಿಸಿದೆ’ ಎಂಬ ಅಂಶವನ್ನು ನ್ಯಾಯಪೀಠ ಉಲ್ಲೇಖಿಸಿತ್ತು.

‘ಲಿಂಗಾಯತ ವರ್ಗಕ್ಕೆ ಸೇರಿರುವ ಅರ್ಜಿದಾರ ರವೀಂದ್ರ ಸ್ವಾಮಿ, ಬೇಡ ಜಂಗಮ ಪ್ರಯೋಜನ ಪಡೆಯಲು ಹಕ್ಕು ಮಂಡಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಅವರ ಕುಟುಂಬದ ಒಬ್ಬರಿಗೆ ಬೇಡ ಜಂಗಮ ಪ್ರಮಾಣ ಪತ್ರ ದೊರೆತಿದೆ ಎಂದ ಮಾತ್ರಕ್ಕೆ ಇತರರಿಗೂ ಆ ಪ್ರಮಾಣ ಪತ್ರ ನೀಡಬೇಕೆಂಬ ಅನುಮತಿಯನ್ನು ಒಪ್ಪಲಾಗದು. ಏಕೆಂದರೆ, ಅವರು ವೀರಶೈವ ಸಮುದಾಯಕ್ಕೆ ಸೇರಿದವರಾಗಿದ್ದಾರೆ’ ಎಂದು ನ್ಯಾಯಪೀಠ ಸ್ಪಷ್ಟಪಡಿಸಿತ್ತು.

ಇದನ್ನು ಪ್ರಶ್ನಿಸಿ ರವೀಂದ್ರಸ್ವಾಮಿ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಿದ್ದರು. ಅದನ್ನು ಸುಪ್ರೀಂ ಕೋರ್ಟ್ ಈ ಹಿಂದೆ ವಜಾಗೊಳಿಸಿತ್ತು.

'ನಾಲ್ಕು ವಾರಗಳಲ್ಲಿ ಪ್ರತಿಕ್ರಿಯೆ ಸಲ್ಲಿಸಿ'

ಕರ್ನಾಟಕ ಬೇಡ ಜಂಗಮ ಸಮಾಜ ಸಂಸ್ಥೆ ಸಲ್ಲಿಸಿದ್ದ ವಿಶೇಷ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ವಿಕ್ರಮ್ನಾಥ್ ಹಾಗೂ ಸಂದೀಪ್ ಮೆಹ್ರಾ ಪೀಠವು, ಬೇಡ ಜಂಗಮ ಪರಿಶಿಷ್ಟ ಜಾತಿ ಪ್ರಮಾಣಪತ್ರ ವಿವಾದಕ್ಕೆ ಸಂಬಂಧಿಸಿದಂತೆ ನಾಲ್ಕು ವಾರಗಳಲ್ಲಿ ಪ್ರತಿಕ್ರಿಯೆ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಈ ಸಂಘವು 4 ಲಕ್ಷ ಸದಸ್ಯರನ್ನು ಹೊಂದಿದೆ.

ಅರ್ಜಿದಾರರ ಪರ ಹಿರಿಯ ವಕೀಲರಾದ ಎಸ್. ಗುರು ಕೃಷ್ಣ ಕುಮಾರ್, ಮಹಾಲಕ್ಷ್ಮಿ ಪಾವನಿ ಮತ್ತು ವಕೀಲ ಟಾಮಿ ಚಾಕೊ ವಾದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-51-932870488

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.