ನವದೆಹಲಿ: ಸುಪ್ರೀಂ ಕೋರ್ಟ್‌ನ 49ನೇ ಮುಖ್ಯ ನ್ಯಾಯಮೂರ್ತಿಯಾಗಿ ಉದಯ್ ಉಮೇಶ್ ಲಲಿತ್ ಅವರನ್ನು ನೇಮಕ ಮಾಡುವ ಶಿಫಾರಸಿಗೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದಾರೆ.

ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ಅವರನ್ನು ಮುಂದಿನ ಮುಖ್ಯ ನ್ಯಾಯಮೂರ್ತಿ ಸ್ಥಾನಕ್ಕೆ ಶಿಫಾರಸು ಮಾಡಿ ಸುಪ್ರೀಂ ಕೋರ್ಟ್ ಸಿಜೆಐ ಎನ್.ವಿ ರಮಣ ಅವರು ಕಳೆದ ವಾರ ಸರ್ಕಾರಕ್ಕೆ ಪತ್ರ ಬರೆದಿದ್ದರು.

ಆಗಸ್ಟ್ 26 ರಂದು ರಮಣ ನಿವೃತ್ತರಾಗಲಿದ್ದಾರೆ. ಮುಂದಿನ ಮುಖ್ಯನ್ಯಾಯಮೂರ್ತಿಯ ಸ್ಥಾನಕ್ಕೆ ಶಿಫಾರಸು ಮಾಡುವಂತೆ ಕಾನೂನು ಸಚಿವಾಲಯದಿಂದ ಬುಧವಾರ ರಮಣ ಅವರಿಗೆ ಮನವಿ ಮಾಡಲಾಗಿತ್ತು.

ಸುಪ್ರೀಂ ಕೋರ್ಟ್‌ನ ಅತ್ಯಂತ ಹಿರಿಯ ನ್ಯಾಯಮೂರ್ತಿಗಳಾಗಿರುವ ಯು.ಯು ಲಲಿತ್ ಅವರು ಶಿಫಾರಸಿನಂತೆ ಭಾರತದ ಮುಖ್ಯ ನ್ಯಾಯಮೂರ್ತಿಯಾದರೂ, ಅವರ ಅಧಿಕಾರವಧಿ ಕೇವಲ ಮೂರು ತಿಂಗಳಿಗೆ ಸೀಮಿತವಾಗಲಿದೆ. ನ್ಯಾಯಮೂರ್ತಿ ಲಲಿತ್ ಅವರು ನವೆಂಬರ್ 8 ರಂದು ನಿವೃತ್ತರಾಗಲಿದ್ದಾರೆ.

ಮುಂದಿನ ಮುಖ್ಯ ನ್ಯಾಯಮೂರ್ತಿಯನ್ನು ನಾಮನಿರ್ದೇಶನ ಮಾಡುವಂತೆ ನಿವೃತ್ತಿಯಾಗಲಿರುವ ಮುಖ್ಯನ್ಯಾಯಮೂರ್ತಿಗಳನ್ನು ಕಾನೂನು ಸಚಿವರು ತಿಂಗಳಿಗೂ ಮೊದಲೇ ಕೋರುತ್ತಾರೆ. ಇದು, ಮುಖ್ಯನ್ಯಾಯಮೂರ್ತಿಗಳ ನೇಮಕ ಪ್ರಕ್ರಿಯೆಯಲ್ಲಿ ಪಾಲಿಸಿಕೊಂಡು ಬಂದಿರುವ ಸಂಪ್ರದಾಯವೂ ಹೌದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.