ನವದೆಹಲಿ/ ಭೋಪಾಲ್/ಜಬಲಪುರ: ನಟಿ ಟ್ವಿಶಾ ಶರ್ಮಾ ಸಾವಿನ ಪ್ರಕರಣದಲ್ಲಿ ಆರೋಪಿಗಳನ್ನು ನ್ಯಾಯಾಲಯ ರಕ್ಷಿಸುತ್ತಿದೆ ಎಂಬ ಮಾಧ್ಯಮಗಳ ಸಂಕಥನದಿಂದ ನೋವು ಉಂಟಾಗಿದೆ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ.

ಈ ಪ್ರಕರಣದಲ್ಲಿ ಸಿಬಿಐನಿಂದ ನ್ಯಾಯಯುತ, ಸ್ವತಂತ್ರ ಮತ್ತು ನಿಷ್ಪಕ್ಷಪಾತ ತನಿಖೆಯನ್ನು ಖಚಿತಪಡಿಸುವುದಾಗಿ ತಿಳಿಸಿದೆ.

ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜಾಯ್ಮಾಲ್ಯಾ ಬಾಗ್ಚಿ ಅವರಿದ್ದ ಪೀಠವು, ‘ಈ ಪ್ರಕರಣದ ಬೆಳವಣಿಗೆಗಳ ಬಗ್ಗೆ ವರದಿ ಮಾಡುವಾಗ ಮಾಧ್ಯಮಗಳು ಸಂಯಮ ಕಾಯ್ದುಕೊಳ್ಳಬೇಕು. ಮಾಧ್ಯಮಗಳಲ್ಲಿ ಬಂದ ಕೆಲ ವರದಿಗಳಿಂದ ನಮಗೆ ನೋವಾಗಿದೆ. ಮಾಧ್ಯಮ ಸ್ನೇಹಿತರು ಸಂತ್ರಸ್ತ ಕುಟುಂಬ ಅಥವಾ ಇತರ ಕುಟುಂಬದವರ ಹೇಳಿಕೆಯನ್ನು ಕೇಳಬಾರದು. ಕಾನೂನು ಪ್ರಕಾರ ತನಿಖೆ ನಡೆಯಲು ಬಿಡಬೇಕು’ ಎಂದು ಸಲಹೆ ನೀಡಿದೆ.

‘ಸಂತ್ರಸ್ತರು ಮತ್ತು ಆರೋಪಿಯ ಕುಟುಂಬದ ಸದಸ್ಯರು ಸಾರ್ವಜನಿಕವಾಗಿ ಅಥವಾ ಮಾಧ್ಯಮಗಳ ಮುಂದೆ ಹೇಳಿಕೆ ನೀಡುವ ಬದಲು, ತನಿಖಾ ಸಂಸ್ಥೆಯ ಮುಂದೆ ತಮ್ಮ ಹೇಳಿಕೆಗಳನ್ನು ದಾಖಲಿಸಬೇಕು. ಇದರಿಂದ ಪ್ರಸ್ತುತ ನಡೆಯುತ್ತಿರುವ ತನಿಖೆಯ ಮೇಲೆ ಯಾವುದೇ ಪೂರ್ವಗ್ರಹ ಅಥವಾ ಪರಿಣಾಮ ಬೀರದಂತೆ ನೋಡಿಕೊಳ್ಳಬಹುದು’ ಎಂದು ಪೀಠವು ಹೇಳಿದೆ.

‘ಈ ಪ್ರಕರಣದ ತನಿಖೆಯನ್ನು ವಹಿಸಿಕೊಳ್ಳಲು ಸಿಬಿಐ ಸಜ್ಜಾಗಿದೆ. ಒಂದು ತಂಡವನ್ನು ಭೋಪಾಲ್ಗೆ ಈಗಾಗಲೇ ಕಳುಹಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷ್ಯಗಳು ಹಾಗೂ ದಾಖಲೆಗಳನ್ನು ಸಂಗ್ರಹಿಸಲಿದೆ’ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಪೀಠದ ಗಮನಕ್ಕೆ ತಂದರು.

‘ಪ್ರಕರಣದ ಆರೋಪಿಯು ವಕೀಲರಾಗಿದ್ದು, ಅವರ ತಾಯಿ ನಿವೃತ್ತ ನ್ಯಾಯಾಧೀಶರಾಗಿರುವುದರಿಂದ ನ್ಯಾಯಯುತ ತನಿಖೆ ನಡೆಯುವುದು ಅನುಮಾನ’ ಎಂಬ ಬಗ್ಗೆ ಮಾಧ್ಯಮಗಳಲ್ಲಿ ವರದಿ ಪ್ರಕಟಗೊಂಡಿದ್ದರಿಂದ ಸುಪ್ರೀಂ ಕೋರ್ಟ್ ಸ್ವಯಂಪ್ರೇರಿತವಾಗಿ ಪ್ರಕರಣವನ್ನು ಕೈಗೆತ್ತಿಕೊಂಡಿತ್ತು.

ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಾಳೆ

ಟ್ವಿಶಾ ಶರ್ಮಾ ಸಾವು ಪ್ರಕರಣ ಸಂಬಂಧ ನಿವೃತ್ತ ನ್ಯಾಯಾಧೀಶರಾದ ಗಿರಿಬಾಲಾ ಸಿಂಗ್ ಅವರಿಗೆ ನೀಡಿರುವ ನಿರೀಕ್ಷಣಾ ಜಾಮೀನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ಮಧ್ಯಪ್ರದೇಶದ ಹೈಕೋರ್ಟ್ ಮೇ 27ಕ್ಕೆ ಮುಂದೂಡಿದೆ. ನ್ಯಾಯಮೂರ್ತಿ ದೇವನಾರಾಯಣ್ ಮಿಶ್ರಾ ಅವರ ಏಕ ಸದಸ್ಯ ಪೀಠವು ಸೋಮವಾರ ವಿಚಾರಣೆ ನಡೆಸಿತು. ‘ಟ್ವಿಶಾ ಅವರ ತಂದೆ ನವನಿಧಿ ಶರ್ಮಾ ಸಲ್ಲಿಸಿದ ಅರ್ಜಿಯ ಪ್ರತಿ ನಮ್ಮ ಕಕ್ಷಿದಾರರಿಗೆ ತಲುಪಿಲ್ಲ. ಈ ಬಗ್ಗೆ ಪ್ರತಿಕ್ರಿಯೆ ಸಲ್ಲಿಸಲು ಕಾಲಾವಕಾಶ ನೀಡಬೇಕು’ ಎಂದು ಗಿರಿಬಾಲಾ ಸಿಂಗ್ ಅವರ ವಕೀಲ ಜಾರ್ಜ್ ಕಾರ್ಲೊ ಕೋರಿದರು.

ಟ್ವಿಶಾ ಪತಿ ಅತ್ತೆಯ ತೀವ್ರ ವಿಚಾರಣೆ

ಟ್ವಿಶಾ ಅವರ ಪತಿ ಸಮರ್ಥ್ ಸಿಂಗ್ ಹಾಗೂ ಅತ್ತೆ ಗಿರಿಬಾಲಾ ಸಿಂಗ್ ಅವರನ್ನು ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ‘ಇಬ್ಬರು ಆರೋಪಿಗಳು ನೀಡಿರುವ ಮಾಹಿತಿಯನ್ನು ಪರಿಶೀಲಿಸಲಾಗುತ್ತಿದೆ. ಸದ್ಯಕ್ಕೆ ಈ ಪ್ರಕರಣ ಆತ್ಮಹತ್ಯೆಯಂತೆ ಕಾಣುತ್ತಿದೆ. ಆದರೆ ತನಿಖೆ ಮುಂದುವರಿದಿದ್ದು ಈ ಹಂತದಲ್ಲಿ ಯಾವುದೇ ತೀರ್ಮಾನಕ್ಕೆ ಬರಲು ಸಾಧ್ಯವಿಲ್ಲ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪೊಲೀಸ್ ಕಸ್ಟಡಿಯಲ್ಲಿರುವ ಸಮರ್ಥ್ ‘ಟ್ವಿಶಾ ಗರ್ಭಿಣಿಯಾದ ನಂತರ ತಮ್ಮ ಸಂಬಂಧ ಹಳಸಿತು’ ಎಂದು ತನಿಖಾಧಿಕಾರಿಗಳಿಗೆ ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.