ನವದೆಹಲಿ: ದೇಶದಲ್ಲಿ ಕೋವಿಡ್ ಬಿಕ್ಕಟ್ಟು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಜೈಲುಗಳಲ್ಲಿ ಕೈದಿಗಳ ಸಂಖ್ಯೆ ಕಡಿಮೆಗೊಳಿಸಬೇಕು. ಕಳೆದ ವರ್ಷ ಜಾಮೀನು ಅಥವಾ ಪರೋಲ್ ಪಡೆದಿದ್ದ ಎಲ್ಲ ಕೈದಿಗಳನ್ನು ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.

ಕಳೆದ ವರ್ಷದ ಮಾರ್ಚ್ ತಿಂಗಳಲ್ಲಿ ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ಒಳಗೊಂಡ ಉನ್ನತಮಟ್ಟದ ಸಮಿತಿ, ಕೆಲ ಕೈದಿಗಳಿಗೆ ಜಾಮೀನಿನ ಮೇಲೆ ಹೊರ ಹೋಗಲು ಅನುಮತಿ ನೀಡಿತ್ತು. ಈಗ ಆದೇಶವನ್ನು ಮುಂದುವರಿಸಿರುವುದಾಗಿ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಮತ್ತು ನ್ಯಾಯಮೂರ್ತಿಗಳಾದ ಎಲ್ ನಾಗೇಶ್ವರ ರಾವ್ ಮತ್ತು ಸೂರ್ಯಕಾಂತ ಅವರನ್ನೊಳಗೊಂಡ ಪೀಠ ತಿಳಿಸಿದೆ.

‘ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ಸಲುವಾಗಿ, ನಾವು ಹಿಂದೆ ನೀಡಿದ್ದ ಆದೇಶಕ್ಕೆ ಅನುಗುಣವಾಗಿ ಪರೋಲ್ ಪಡೆದ ಕೈದಿಗಳಿಗೆ ಮತ್ತೆ 90 ದಿನಗಳ ಕಾಲ ಪರೋಲ್ ನೀಡಲಾಗುತ್ತಿದೆ‘ ಎಂದು ನ್ಯಾಯಪೀಠವು ಶನಿವಾರ ತಿಳಿಸಿದೆ.

ತೀರ್ಪೊಂದನ್ನು ಉಲ್ಲೇಖಿಸಿದ ನ್ಯಾಯಾಲಯ, ಗರಿಷ್ಠ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸುವ ಪ್ರಕರಣಗಳಲ್ಲಿ ಆರೋಪಿಗಳನ್ನು ಯಾಂತ್ರಿಕವಾಗಿ ಬಂಧಿಸದಂತೆ ಅಧಿಕಾರಿಗಳನ್ನು ತಿಳಿಸಿತು.

ಈ ವಿಷಯದ ಬಗ್ಗೆ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ಮಾರ್ಗಸೂಚಿಗಳನ್ನು ಅಳವಡಿಸಿಕೊಂಡು ಹೊಸ ಕೈದಿಗಳ ಬಿಡುಗಡೆಯನ್ನು ಪರಿಗಣಿಸುವಂತೆ ಉನ್ನತಮಟ್ಟದ ಸಮಿತಿಗಳಿಗೆ ನಿರ್ದೇಶನ ನೀಡಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.