ನವದೆಹಲಿ (ಪಿಟಿಐ): ಮುಖ್ಯ ಚುನಾವಣಾ ಆಯುಕ್ತರು (ಸಿಇಸಿ) ಮತ್ತು ಇತರ ಚುನಾವಣಾ ಆಯುಕ್ತರ (ಇಸಿ) ನೇಮಕಾತಿ ಕಾರ್ಯವಿಧಾನಗಳನ್ನು ನಿಯಂತ್ರಿಸಲು ಕಾನೂನು ರೂಪಿಸುವಂತೆ ಸಂಸತ್ತಿಗೆ ನ್ಯಾಯಾಲಯ ನಿರ್ದೇಶಿಸಬಹುದೇ ಎಂದು ಸುಪ್ರೀಂ ಕೋರ್ಟ್ ಬುಧವಾರ ಪ್ರಶ್ನಿಸಿತು.

ಸಿಇಸಿ ಮತ್ತು ಇ.ಸಿಗಳ ನೇಮಕ ಸಮಿತಿಯಿಂದ ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಅವರನ್ನು ಹೊರಗಿಟ್ಟಿರುವ 2023ರ ಕಾಯ್ದೆಯ ಸಿಂಧುತ್ವ ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ಅಂತಿಮ ವಿಚಾರಣೆ ವೇಳೆ ನ್ಯಾಯಮೂರ್ತಿಗಳಾದ ದೀಪಂಕರ್ ದತ್ತ ಮತ್ತು ಸತೀಶ್ ಚಂದ್ರ ಶರ್ಮಾ ಅವರ ಪೀಠ ಈ ಹೇಳಿಕೆ ನೀಡಿದೆ.

ಅರ್ಜಿಗಳ ಪರ ವಕೀಲರು ಮತ್ತು ಸರ್ಕಾರಿ ವಕೀಲರ ವಾದ, ಪ್ರತಿವಾದವನ್ನು ಪೀಠ ಆಲಿಸಿತು. ಈ ಕುರಿತು ವಿಚಾರಣೆ ಗುರುವಾರವು ಮುಂದುವರಿಯಲಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-4-1032901465

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.