ಭಾನುವಾರ, 16 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಕ್ರಮ ಹಣ ವರ್ಗಾವಣೆ ಆರೋಪ: ಶಿವಕುಮಾರ್ ವಿರುದ್ಧದ ಪ್ರಕರಣ ರದ್ದು

Published 10 ಜೂನ್ 2024, 16:17 IST
Last Updated 10 ಜೂನ್ 2024, 16:17 IST
ಅಕ್ಷರ ಗಾತ್ರ

ನವದೆಹಲಿ: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪದ ಅಡಿಯಲ್ಲಿ 2018ರಲ್ಲಿ ದಾಖಲಾಗಿದ್ದ ಪ್ರಕರಣವನ್ನು ಸುಪ್ರೀಂ ಕೋರ್ಟ್‌ ಸೋಮವಾರ ರದ್ದುಪಡಿಸಿದೆ.

ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು (ಇ.ಡಿ) ತಮಗೆ ನೀಡಿದ್ದ ಸಮನ್ಸ್ ಪ್ರಶ್ನಿಸಿ ಶಿವಕುಮಾರ್ ಅವರು ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಸಮನ್ಸ್ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿತ್ತು. ಇದನ್ನು ಪ್ರಶ್ನಿಸಿ ಶಿವಕುಮಾರ್ ಅವರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.

ಮೇಲ್ಮನವಿಯನ್ನು ಮಾನ್ಯ ಮಾಡಿರುವ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಕೆ.ವಿ. ವಿಶ್ವನಾಥನ್ ಅವರು ಇರುವ ವಿಭಾಗೀಯ ಪೀಠವು, ಹೈಕೋರ್ಟ್ ಆದೇಶವನ್ನು ರದ್ದುಪಡಿಸಿತು. 

‘ಮೇಲ್ಮನವಿ ಸಲ್ಲಿಸಿರುವವರ ವಿರುದ್ಧ ಪಿಎಂಎಲ್‌ಎ ಅಡಿಯಲ್ಲಿ ಕ್ರಮ ಜರುಗಿಸಿದ್ದನ್ನು ರದ್ದುಪಡಿಸಲಾಗಿದೆ’ ಎಂದು ಪೀಠವು ಹೇಳಿದೆ. ಶಿವಕುಮಾರ್ ಹಾಗೂ ಕರ್ನಾಟಕ ಭವನದ (ದೆಹಲಿ) ನೌಕರ ಎ. ಹನುಮಂತಯ್ಯ ಅವರು ಮೇಲ್ಮನವಿ ಸಲ್ಲಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT