ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Bilkis Bano Case: ಅಪರಾಧಿಗಳ ಬಿಡುಗಡೆ ಆದೇಶ ರದ್ದುಪಡಿಸಿದ ಸುಪ್ರೀಂ ಕೋರ್ಟ್

Published 8 ಜನವರಿ 2024, 6:14 IST
Last Updated 8 ಜನವರಿ 2024, 6:14 IST
ಅಕ್ಷರ ಗಾತ್ರ

ನವದೆಹಲಿ: ಬಿಲ್ಕಿಸ್ ಬಾನು ಅವರ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ, ಅವರ ಕುಟುಂಬದ 7 ಸದಸ್ಯರನ್ನು ಹತ್ಯೆ ಮಾಡಿದ್ದ ಪ್ರಕರಣದ 11 ಅಪರಾಧಿಗಳ ಅವಧಿಪೂರ್ವ ಬಿಡುಗಡೆಗೆ ಅವಕಾಶ ಕಲ್ಪಿಸಿದ್ದ ಗುಜರಾತ್‌ ಸರ್ಕಾರದ ಆದೇಶವನ್ನು ಸುಪ್ರೀಂ ಕೋರ್ಟ್ ಸೋಮವಾರ ರದ್ದುಪಡಿಸಿದೆ.

ಅಪರಾಧಿಗಳ ಬಿಡುಗಡೆ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಗಳ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಬಿ.ವಿ.ನಾಗರತ್ನಾ ಮತ್ತು ಉಜ್ಜಲ್‌ ಭುಯಾನ್‌ ಅವರಿದ್ದ ಪೀಠ ನಡೆಸಿತು. ಗುಜರಾತ್‌ ಸರ್ಕಾರವು ಶಿಕ್ಷೆ ರದ್ದು ಆದೇಶ ಹೊರಡಿಸಿರುವುದು ಸೂಕ್ತವಲ್ಲ ಎಂದು ಪೀಠ ಹೇಳಿದೆ.

2002ರಲ್ಲಿ ಗೋಧ್ರಾ ರೈಲು ದುರಂತದ ಬಳಿಕ ಗುಜರಾತ್‌ನಲ್ಲಿ ನಡೆದಿದ್ದ ಹಿಂಸಾಚಾರದ ವೇಳೆ ಪಲಾಯನ ಮಾಡುತ್ತಿದ್ದ ಬಿಲ್ಕಿಸ್‌ ಬಾನು ಅವರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿತ್ತು. ಆಗ 21 ವರ್ಷದವರಾಗಿದ್ದ ಬಾನು, ಐದು ತಿಂಗಳ ಗರ್ಭಿಣಿಯೂ ಆಗಿದ್ದರು. ಅವರ ಮೂರು ವರ್ಷದ ಮಗಳೂ ಸೇರಿದಂತೆ 7 ಮಂದಿಯನ್ನ ಹತ್ಯೆ ಮಾಡಲಾಗಿತ್ತು.

ಗುಜರಾತ್ ಸರ್ಕಾರದ ಆದೇಶದ ಮೇರೆಗೆ ಎಲ್ಲ ಅಪರಾಧಿಗಳು 2022ರ ಆಗಸ್ಟ್‌ 15ರಂದು ಜೈಲಿನಿಂದ ಬಿಡುಗಡೆಯಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT