ನವದೆಹಲಿ: ‘ರಾಷ್ಟ್ರೀಯ ಹೆದ್ದಾರಿ ಮಾರ್ಗಲ್ಲಿ 65 ಕಿ.ಮೀವರೆಗೆ ಕ್ರಮಿಸಲು 12 ಗಂಟೆಗಳ ಕಾಲ ಟ್ರಾಫಿಕ್ ದಟ್ಟಣೆಯಲ್ಲಿ ಪ್ರಯಾಣಿಕ ಸೆಣಸಾಡಬೇಕು ಎನ್ನುವಂತಾದರೆ ಆತ ಏಕೆ ಟೋಲ್ ಪಾವತಿಸಬೇಕು’ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವನ್ನು (ಎನ್ಎಚ್ಎಐ) ಸುಪ್ರೀಂಕೋರ್ಟ್ ಸೋಮವಾರ ಪ್ರಶ್ನಿಸಿದೆ.

ಕೇರಳದ ತ್ರಿಶ್ಶೂರ್ನ ಪಾಲಿಯೇಕ್ಕರ ಟೋಲ್ ಪ್ಲಾಜಾದಲ್ಲಿ ಟೋಲ್ ಸಂಗ್ರಹವನ್ನು ರದ್ದುಗೊಳಿಸಿರುವ ಕೇರಳ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಗುರುವಾಯೂರ್ ಮೂಲ ಸೌಕರ್ಯ ಸಂಸ್ಥೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದವು.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ.ಆರ್. ಗವಾಯಿ ಹಾಗೂ ನ್ಯಾಯಮೂರ್ತಿ ಕೆ.ವಿನೋದ್ ಚಂದ್ರನ್, ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಅವರನ್ನೊಳಗೊಂಡ ಪೀಠವು ಈ ಅರ್ಜಿಯನ್ನು ವಿಚಾರಣೆ ನಡೆಸಿದೆ.

ವಿಚಾರಣೆ ವೇಳೆ, ಹೆದ್ದಾರಿ ಮಾರ್ಗದಲ್ಲಿ ವಾರಂತ್ಯದಲ್ಲಿ 12 ಗಂಟೆಗಳ ಟ್ರಾಫಿಕ್ ದಟ್ಟಣೆ ಇರುತ್ತದೆ ಎಂಬುದನ್ನು ನ್ಯಾಯಪೀಠದ ಗಮನಕ್ಕೆ ತರಲಾಗಿದೆ.

ನ್ಯಾಯಪೀಠವು ಪ್ರಕರಣ ಕುರಿತ ತೀರ್ಪನ್ನು ಕಾಯ್ದಿರಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.