ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅನಾರೋಗ್ಯ: ಶಿಕ್ಷೆ ಕಡಿತ ಕೋರಿದ್ದ ಅಸಾರಾಂ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

Published 1 ಮಾರ್ಚ್ 2024, 11:36 IST
Last Updated 1 ಮಾರ್ಚ್ 2024, 11:36 IST
ಅಕ್ಷರ ಗಾತ್ರ

ನವದೆಹಲಿ: ಅತ್ಯಾಚಾರ ಪ್ರಕರಣದಲ್ಲಿ ತಮಗೆ ವಿಧಿಸಲಾಗಿರುವ ಜೀವಾವಧಿ ಶಿಕ್ಷೆಯನ್ನು ಅನಾರೋಗ್ಯದ ಕಾರಣದಿಂದಾಗಿ ಕಡಿತಗೊಳಿಸಬೇಕು ಎಂದು ಕೋರಿ ಸ್ವಯಂಘೋಷಿತ ದೇವಮಾನವ ಅಸಾರಾಂ ಬಾಪು ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

ನ್ಯಾಯಮೂರ್ತಿಗಳಾದ ಸಂಜೀವ ಖನ್ನಾ ಹಾಗೂ ದೀಪನ್‌ಕರ್ ದತ್ತಾ ಅವರಿದ್ದ ಪೀಠ ಅಸಾರಾಂ ಬಾಪು ಅರ್ಜಿಯ ವಿಚಾರಣೆ ನಡೆಸಿತು.

ಮಹಾರಾಷ್ಟ್ರದ ಮಾಧವಬಾಗ್ ಹಾರ್ಟ್ ಹಾಸ್ಟಿಟಲ್‌ನಲ್ಲಿ ಪೊಲೀಸ್‌ ಕಸ್ಟಡಿಯಲ್ಲಿದ್ದುಕೊಂಡೇ ಚಿಕಿತ್ಸೆ ಪಡೆಯಲು ಅವಕಾಶ ಕಲ್ಪಿಸುವಂತೆ ಅಸರಾಂ ಪರ ಹಾಜರಿದ್ದ ವಕೀಲರು ಪೀಠವನ್ನು ಕೋರಿದರು. ಇದನ್ನು ರಾಜಸ್ಥಾನ ಹೈಕೋರ್ಟ್‌ನಲ್ಲೇ ಕೋರುವಂತೆ ಸುಪ್ರೀಂ ಕೋರ್ಟ್‌ ಸಲಹೆ ನೀಡಿತು.

ಪ್ರಕರಣದಲ್ಲಿ ಶಿಕ್ಷೆಯ ವಿರುದ್ಧ ಹೈಕೋರ್ಟ್‌ನಲ್ಲಿ ಸಲ್ಲಿಸಲಾದ ಮೇಲ್ಮನವಿ ಅರ್ಜಿಯ ವಿಚಾರಣೆಯನ್ನು ವಿಳಂಬಗೊಳಿಸಲು ಅಸಾರಾಂ ಮಾಡಿದ ಉದ್ದೇಶಪೂರ್ವಕ ಪ್ರಯತ್ನಗಳನ್ನು ನ್ಯಾಯಮೂರ್ತಿ ಖನ್ನಾ ಅವರು ಇದೇ ವೇಳೆ ಉಲ್ಲೇಖಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT