ನವದೆಹಲಿ: ಕರ್ನಾಟಕದ ವಿವಿಧ ನಿಗಮ, ಮಂಡಳಿಗೆ ನೇಮಿಸಿರುವ ವಿಧಾನಸಭಾ ಸದಸ್ಯರು ಮತ್ತು ವಿಧಾನ ಪರಿಷತ್ ಸದಸ್ಯರಿಗೆ ರಾಜ್ಯ ಸರ್ಕಾರವು ಸಚಿವ ಸಂಪುಟದ ಸ್ಥಾನಮಾನ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ನಿರಾಕರಿಸಿದೆ.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜಾಯ್ಮಾಲ್ಯ ಬಾಗ್ಚಿ ಅವರಿದ್ದ ಪೀಠವು ಅರ್ಜಿದಾರರಿಗೆ ಹೈಕೋರ್ಟ್ ಮುಂದೆ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಲು ಸೂಚಿಸಿದೆ.

‘ಹೈಕೋರ್ಟ್ನಲ್ಲಿ ಈ ಅರ್ಜಿ ಸಲ್ಲಿಸಲು ಅರ್ಜಿದಾರರಿಗೆ ಸ್ವಾತಂತ್ರ್ಯ ನೀಡುವ ಜೊತೆಗೆ ಈ ಅರ್ಜಿಯನ್ನು ವಿಲೇವಾರಿ ಮಾಡಲಾಗಿದೆ’ ಎಂದು ನ್ಯಾಯಪೀಠ ತಿಳಿಸಿದೆ.

ಅರ್ಜಿದಾರರ ಪರ ಹಾಜರಾದ ಹಿರಿಯ ವಕೀಲ ಕೆ. ಪರಮೇಶ್ವರ್, ‘ಹೈಕೋರ್ಟ್ನಲ್ಲಿ ಈ ಅರ್ಜಿಯನ್ನು ಗಂಭೀರವಾಗಿ ಪರಿಗಣಿಸಿಲ್ಲ. ಸೌಲಭ್ಯ ನೀಡಲು ಇಲಾಖೆಯ ಬಳಿ ಹಣವಿಲ್ಲ, ದೇಶದ ಸಂಚಿತ ನಿಧಿಯಿಂದ ನೀಡಲಾಗುತ್ತಿದೆ’ ಎಂದು ನ್ಯಾಯಪೀಠದ ಗಮನಸೆಳೆದರು.

ಕಳೆದ ಮಾರ್ಚ್ 4ರಂದು ಕರ್ನಾಟಕ ಹೈಕೋರ್ಟ್ ಈ ಅರ್ಜಿಯನ್ನು ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಕೆಲಸ ಮಾಡುತ್ತಿರುವ ಸೂರ್ಯ ಪಯಾಲ ಅವರು ಮೇಲ್ಮನವಿ ಸಲ್ಲಿಸಿದ್ದರು.

‘ಶಾಸಕರಿಗೆ ಸಚಿವ ಸಂಪುಟದ ಸ್ಥಾನಮಾನ ನೀಡಿದರೆ, ಹೆಚ್ಚಿನ ವೇತನ, ಸರ್ಕಾರದಿಂದಲೇ ಅಧಿಕೃತ ವಾಹನ, ಇಂಧನ ಭತ್ಯೆ, ಮನೆ ಬಾಡಿಗೆ ಹಾಗೂ ವೈದ್ಯಕೀಯ ವೆಚ್ಚವನ್ನು ಮರು ಪಾವತಿಸಲಾಗುತ್ತದೆ. ಸಂವಿಧಾನದ 191ನೇ ವಿಧಿಯ ಪ್ರಕಾರ, ಇದು ಲಾಭದಾಯಕ ಹುದ್ದೆಯಾಗಿದ್ದು, ಅವರನ್ನು ಹುದ್ದೆಯಿಂದಲೇ ಅನರ್ಹಗೊಳಿಸಬಹುದಾಗಿದೆ’ ಎಂದು ಪೀಠದ ಗಮನ ಸೆಳೆದರು.

ವಾದವನ್ನು ಪರಿಗಣಿಸಿದ ನ್ಯಾಯಪೀಠ, ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸುವಂತೆ ಅರ್ಜಿದಾರರಿಗೆ ಸೂಚಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.