ನವದೆಹಲಿ: ಭಾರತ ಕುಸ್ತಿ ಫೆಡರೇಷನ್ (ಡಬ್ಲ್ಯುಎಫ್‌ಐ) ಚುನಾವಣೆಗೆ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ನೀಡಿರುವ ತಡೆಯಾಜ್ಞೆಗೆ ಸಂಬಂಧಿಸಿದಂತೆ ಮಧ್ಯಪ್ರವೇಶಕ್ಕೆ ಸುಪ್ರೀಂ ಕೋರ್ಟ್, ಮಂಗಳವಾರ ನಿರಾಕರಿಸಿದೆ.
ಆಗಸ್ಟ್ 11ರಂದು ಹೈಕೋರ್ಟ್ ನೀಡಿರುವ ಆದೇಶ ಪ್ರಶ್ನಿಸಿ ಆಂಧ್ರಪ್ರದೇಶದ ಅಮೆಚೂರ್ ಕುಸ್ತಿ ಅಸೋಸಿಯೇಷನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಅಭಯ್ ಎಸ್. ಓಕಾ ಹಾಗೂ ಪಂಕಜ್ ಮಿಥಾಲ್ ಅವರಿದ್ದ ವಿಭಾಗೀಯ ನ್ಯಾಯಪೀಠವು ನಡೆಸಿತು.
‘ನಾವು ಏಕೆ ಇದರಲ್ಲಿ ಮಧ್ಯಪ್ರವೇಶಿಸಬೇಕು?’ ಎಂದು ಪ್ರಶ್ನಿಸಿದ ನ್ಯಾಯಪೀಠವು, ‘ಮಧ್ಯಂತರ ತಡೆಯಾಜ್ಞೆ ತೆರವುಗೊಳಿಸುವಂತೆ ಹೈಕೋರ್ಟ್‌ಗೆ ಮನವಿ ಮಾಡಿ, ಹೈಕೋರ್ಟ್‌ನಲ್ಲಿಯೇ ಅರ್ಜಿ ಸಲ್ಲಿಸಿ ಸಮಸ್ಯೆ ಬಗೆಹರಿಸಿಕೊಳ್ಳಿ’ ಎಂದು ಅರ್ಜಿದಾರರಿಗೆ ಸೂಚಿಸಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.