ನವದೆಹಲಿ: ನಿರ್ದಿಷ್ಟ ಸಮುದಾಯದ ಮೇಲೆ ಗುರಿಯಿಟ್ಟು ಗುಂಡು ಹೊಡೆದ ವಿಡಿಯೊಗೆ ಸಂಬಂಧಿಸಿದಂತೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಈ ವಿಚಾರವನ್ನು ಗುವಾಹಟಿ ಹೈಕೋರ್ಟ್ನಲ್ಲಿ ಸಲ್ಲಿಸುವಂತೆ ಅರ್ಜಿದಾರರಿಗೆ ಸೂಚನೆ ನೀಡಿದೆ.

ಅರ್ಜಿಯನ್ನು ತ್ವರಿತಗತಿಯಲ್ಲಿ ವಿಚಾರಣೆ ನಡೆಸುವಂತೆ ಗುವಾಹಟಿ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಗೆ ಸುಪ್ರೀಂ ಕೋರ್ಟ್ ತಿಳಿಸಿದೆ.

‘ನೀವು ಯಾವ ಕಾರಣಕ್ಕಾಗಿ ಗುವಾಹಟಿ ಹೈಕೋರ್ಟ್ಗೆ ತೆರಳಲಿಲ್ಲ? ಅವರ ಅಧಿಕಾರವನ್ನು ದುರ್ಬಲಗೊಳಿಸಬೇಡಿ. ಅರ್ಜಿದಾರರು ಸಂಯಮದಿಂದ ವರ್ತಿಸಿ, ಸಾಂವಿಧಾನಿಕ ಮೌಲ್ಯವನ್ನು ಉಳಿಸಿಕೊಳ್ಳುವುದು ಅಗತ್ಯ. ಚುನಾವಣೆಗೂ ಮುನ್ನ ಇಂದೊಂದು ಅಭ್ಯಾಸವಾಗಿಬಿಟ್ಟಿದೆ’ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾ.ಜಾಯ್ಮಾಲ್ಯ ಬಾಗ್ಚಿ, ನ್ಯಾ. ವಿಪುಲ್ ಎಂ ಪಂಚೋಲಿ ಅವರಿದ್ದ ಪೀಠವು ತಿಳಿಸಿದೆ.

‘ಪ್ರತಿಯೊಂದು ವಿಷಯ ಇಲ್ಲಿಯೇ (ಸುಪ್ರೀಂ ಕೋರ್ಟ್) ಪರಿಸಮಾಪ್ತಿಯಾಗುವುದು ಪ್ರವೃತ್ತಿಯಾಗಿಬಿಟ್ಟಿದೆ. ನಾವು ಈಗಾಗಲೇ ಹೈಕೋರ್ಟ್ ವ್ಯಾಪ್ತಿಯಿಂದ ಪಾರಿಸರಿಕ ಹಾಗೂ ವಾಣಿಜ್ಯಿಕ ವ್ಯಾಜ್ಯಗಳನ್ನು ಮುಕ್ತಗೊಳಿಸಿದ್ದೇವೆ’ ಎಂದು ಪೀಠವು ಅಸಮಾಧಾನ ವ್ಯಕ್ತಪಡಿಸಿತು.

‘ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರು ಪದೇ ಪದೇ ಅಪರಾಧ ಎಸಗುತ್ತಿದ್ದು, ಕೂಡಲೇ ಈ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಬೇಕು’ ಎಂದು ಅರ್ಜಿದಾರರ ಪರ ಹಾಜರಾದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಮನವಿ ಮಾಡಿದರು. ಶರ್ಮಾ ವಿರುದ್ಧ ಕ್ರಮಕ್ಕೆ ಕೋರಿ ಎಡಪಕ್ಷದ ನಾಯಕರು ಸಲ್ಲಿಸಿದ್ದ ಅರ್ಜಿಯನ್ನು ಪಟ್ಟಿ ಮಾಡಲು ಸುಪ್ರೀಂಕೋರ್ಟ್ ಫೆಬ್ರುವರಿ 10ರಂದು ಒಪ್ಪಿಗೆ ಸೂಚಿಸಿತ್ತು.

ಚುನಾವಣೆಗೂ ಮುಂಚಿತವಾಗಿ ಹೋರಾಟಗಳು ನಡೆಯುತ್ತಿವೆ ಎಂದು ಅಸ್ಸಾಂ ವಿಧಾನಸಭಾ ಚುನಾವಣೆಯ ಹಿನ್ನೆಲೆಯನ್ನು ಪೀಠ ಉಲ್ಲೇಖಿಸಿತು. ಸಿಪಿಐ ಹಾಗೂ ಸಿಪಿಐ(ಎಂ)ನ ಕೆಲವು ನಾಯಕರ ಪರವಾಗಿ ವಕೀಲ ನಿಜಾಂ ಪಾಷಾ ಸಲ್ಲಿಸಿದ್ದ ಅರ್ಜಿಯನ್ನು ಪಟ್ಟಿ ಮಾಡಲು ಸುಪ್ರೀಂ ಕೋರ್ಟ್ ಈ ಹಿಂದೆ ಒಪ್ಪಿಗೆ ನೀಡಿತ್ತು.

ಆರೋಪ ಏನು?

ಬಿಳಿ ಟೋಪಿ ಹಾಗೂ ಗಡ್ಡ ಬಿಟ್ಟಿದ ಇಬ್ಬರು ವ್ಯಕ್ತಿಗಳ ಮೇಲೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಗುರಿಯಿಟ್ಟು ಗುಂಡು ಹೊಡೆದ ವಿಡಿಯೊವನ್ನು ಅಸ್ಸಾಂನ ಬಿಜೆಪಿ ಘಟಕವು ಫೆಬ್ರುವರಿ 7ರಂದು ‘ಎಕ್ಸ್’ ಖಾತೆಯಲ್ಲಿ ಹಂಚಿಕೊಂಡಿತ್ತು.

ಈ ಪೋಸ್ಟ್ ಭಾರಿ ವಿವಾದಕ್ಕೆ ಕಾರಣವಾಗಿ, ರಾಜಕೀಯವಾಗಿ ತೀವ್ರ ಟೀಕೆಗೆ ಗುರಿಯಾಗಿತ್ತು. ಧಾರ್ಮಿಕ ಆಧಾರದಲ್ಲಿ ಹಿಂಸೆಗೆ ಪ್ರಚೋದನೆ ನೀಡುತ್ತಿದ್ದ ಎಂಬ ಆರೋಪ ಕೇಳಿಬಂದ ನಂತರ ಈ ಪೋಸ್ಟ್ ಅನ್ನು ಬಿಜೆಪಿ ಘಟಕವು ತೆಗೆದು ಹಾಕಿತ್ತು.

ಶರ್ಮಾ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಕೋರಿ ಸಿಪಿಐ ನಾಯಕಿ ಅನ್ನಿ ರಾಜಾ ಕೂಡ ಪ್ರತ್ಯೇಕ ಅರ್ಜಿ ಸಲ್ಲಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡದಿಂದ (ಎಸ್ಐಟಿ) ತನಿಖೆ ನಡೆಸುವಂತೆ ಕೋರಿ ಅರ್ಜಿಯಲ್ಲಿ ಮನವಿ ಮಾಡಿದ್ದರು. ರಾಜ್ಯ ಹಾಗೂ ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿರುವ ಕಾರಣ ಸ್ವತಂತ್ರ ತನಿಖೆ ನಿರೀಕ್ಷಿಸಲು ಸಾಧ್ಯವಿಲ್ಲ ಎಂದು ಅರ್ಜಿಯಲ್ಲಿ ತಿಳಿಸಿದ್ದರು.
.ಅಸ್ಸಾಂ ಸಿಎಂ ಮುಸ್ಲಿಮರಿಗೆ ಗುಂಡು ಹೊಡೆಯುವ ವಿಡಿಯೊ ಹಂಚಿ, ಡಿಲೀಟ್ ಮಾಡಿದ ಬಿಜೆಪಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.