ನವದೆಹಲಿ: ಜೂನ್ 21ಕ್ಕೆ ನಿಗದಿಯಾಗಿರುವ ‘ನೀಟ್-ಯುಜಿ’ 2026ರ ಮರುಪರೀಕ್ಷೆಯನ್ನು ಕಂಪ್ಯೂಟರ್ ಮೂಲಕ (ಕಂಪ್ಯೂಟರ್ ಬೇಸ್ಡ್ ಟೆಸ್ಟ್– ಸಿಬಿಟಿ) ನಡೆಸಲು ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಸಲಾದ ಅರ್ಜಿಯನ್ನು ತಕ್ಷಣ ಪರಿಗಣಿಸಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ.

ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಮತ್ತು ಅರವಿಂದ ಕುಮಾರ್ ಅವರ ಪೀಠವು, ಈ ವಿಷಯದ ತ್ವರಿತ ವಿಚಾರಣೆಗೆ ಒಲವು ತೋರುವುದಿಲ್ಲ ಎಂದು ಸ್ಪಷ್ಟಪಡಿಸಿತು. ಅರ್ಜಿದಾರರನ್ನು ಪ್ರತಿನಿಧಿಸಿದ ವಕೀಲ ಸತ್ಯಂ ಸಿಂಗ್ ಅವರು ಪರೀಕ್ಷೆಯನ್ನು ಸಿಬಿಟಿ ಮಾದರಿಯಲ್ಲಿ ನಡೆಸಬೇಕು ಎಂದು ಪೀಠವನ್ನು ಒತ್ತಾಯಿಸಿದರು.

ಇದೇ ರೀತಿಯ ಅರ್ಜಿಗಳನ್ನು ಈಗಾಗಲೇ ವಜಾಗೊಳಿಸಲಾಗಿದೆ ಎಂದು ಹೇಳಿದ ನ್ಯಾಯಮೂರ್ತಿ ನರಸಿಂಹ, ‘ನೀಟ್–ಯುಜಿ’ ಮರುಪರೀಕ್ಷೆ ನಡೆಸಲು ಇರುವ ಸವಾಲುಗಳನ್ನು ಎತ್ತಿ ತೋರಿಸಿದರು.

ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯಲ್ಲಿನ (ಎನ್ಟಿಎ) ಸುಧಾರಣೆಗಳು ಮತ್ತು ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಸಂಬಂಧಿಸಿದ ಅರ್ಜಿಗಳೊಂದಿಗೆ ಈ ಅರ್ಜಿಯನ್ನು ಜುಲೈನಲ್ಲಿ ವಿಚಾರಣೆಗೆ ಕೈಗೆತ್ತಿಕೊಳ್ಳಲಾಗುವುದು ಎಂದು ಪೀಠವು ಹೇಳಿತು.

ಮುಂದಿನ ವರ್ಷದಿಂದ (2027) ‘ನೀಟ್–ಯುಜಿ’ಗೆ ಕಂಪ್ಯೂಟರ್ ಮೂಲಕ ಪರೀಕ್ಷೆ ನಡೆಸಲು ಸಿದ್ಧವಾಗಿರುವುದಾಗಿ ಎನ್ಟಿಎ ಈಗಾಗಲೇ ಸುಪ್ರೀಂ ಕೋರ್ಟ್ಗೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.