ನವದೆಹಲಿ: ರೈತರ ಪ್ರತಿಭಟನೆ ಕುರಿತ ಟ್ವೀಟ್ ಸಂಬಂಧ ತಮ್ಮ ವಿರುದ್ಧ ದಾಖಲಾಗಿರುವ ಮಾನನಷ್ಟ ಪ್ರಕರಣ ರದ್ದು ಕೋರಿದ್ದ ಅರ್ಜಿ ವಜಾ ಮಾಡಿರುವ ಹೈಕೋರ್ಟ್ ಆದೇಶ ಪ್ರಶ್ನಿಸಿ ನಟಿ ಮತ್ತು ಬಿಜೆಪಿ ಸಂಸದೆ ಕಂಗನಾ ರನೌತ್ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರು ಇದ್ದ ಪೀಠವು ಅರ್ಜಿ ಪುರಸ್ಕರಿಸಲಿಲ್ಲ. ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ತೀರ್ಪಿನ ವಿರುದ್ಧ ಸಲ್ಲಿಸಿರುವ ವಿಶೇಷ ಅರ್ಜಿ ವಾಪಸ್ ಪಡೆಯುವಂತೆ ಕಂಗನಾ ಪರ ವಕೀಲರಿಗೆ ಸೂಚಿಸಿತು.

ಕಂಗನಾ ಪರ ವಕೀಲರು ಅರ್ಜಿ ಸಂಬಂಧ ವಾದಕ್ಕೆ ಅವಕಾಶ ಕೇಳಿದರು. ಆದರೆ ಪೀಠವು, ಇದು ಪ್ರಕರಣದಲ್ಲಿ ಈಗಾಗಲೇ ನಡೆಯುತ್ತಿರುವ ವಿಚಾರಣೆಯನ್ನು ಪೂರ್ವಾಗ್ರಹದಿಂದ ನೋಡಿದಂತಾಗುತ್ತದೆ ಎಂದು ಹೇಳಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.