ನವದೆಹಲಿ: ರಾಜಕೀಯ ಪಕ್ಷಗಳು ನಡೆಸುವ ಅಕ್ರಮ ಚಟುವಟಿಕೆಗಳನ್ನು ನಿಯಂತ್ರಿಸಲು ರಾಜ್ಯ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್) ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

ಘನಶ್ಯಾಮ್ ದಯಾಳು ಉಪಾಧ್ಯಾಯ್ ಎಂಬವರು ಪಿಐಎಲ್ ಸಲ್ಲಿಸಿದ್ದರು.

‘ಸಾರ್ವಜನಿಕ ಹಿತಾಸಕ್ತಿ ದಾವೆಗಳು ಅಗತ್ಯ. ಆದರೆ ಪಿಐಎಲ್ಗಳ ಹೆಸರಿನಲ್ಲಿ ಪ್ರಚಾರ ಹಿತಾಸಕ್ತಿ ಅರ್ಜಿ ದಾಖಲಿಸಲು ಅನುಮತಿ ನೀಡುವುದಿಲ್ಲ’ ಎಂದು ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ, ನ್ಯಾಯಮೂರ್ತಿಗಳಾದ ಕೆ. ವಿನೋದ್ ಚಂದ್ರನ್, ಅತುಲ್ ಎಸ್.ಚಂದೂರ್ಕರ್ ನೇತೃತ್ವದ ನ್ಯಾಯಪೀಠವು ತಿಳಿಸಿದೆ.

ಪಿಐಎಲ್ ವಿಚಾರದಲ್ಲಿ ಸುಪ್ರೀಂ ಕೋರ್ಟ್ ನೇರವಾಗಿ ಸಂಪರ್ಕಿಸುವ ಅರ್ಜಿದಾರರ ನಿಲುವಿನ ಕುರಿತು ನ್ಯಾಯಪೀಠವು ತೀವ್ರ ಅಸಮಾಧಾನ ವ್ಯಕ್ತಪಡಿಸಿತು. ಇದನ್ನು ‘ಪ್ರಚಾರ ಹಿತಾಸಕ್ತಿ ಮೊಕದ್ದಮೆ’ ಎನ್ನಬೇಕಷ್ಟೆ’ ಎಂದಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.