ನವದೆಹಲಿ: ‘ಬೀದಿನಾಯಿಗಳನ್ನು ಕೊಲ್ಲಲು ಸುಪ್ರೀಂ ಕೋರ್ಟ್ ನಮಗೆ ಮುಕ್ತ ಅವಕಾಶ ನೀಡಿದೆ’ ಎಂಬ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಹೇಳಿಕೆಯನ್ನು ಸದ್ಯಕ್ಕೆ ನಾವು ಪರಿಶೀಲನೆಗೆ ಒಳಪಡಿಸುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ.

ಮಾನ್ ಹೇಳಿಕೆಯನ್ನು ಪರಿಶೀಲಿಸುವಂತೆ ವಕೀಲ ರೊಬ್ಬರು ಮಾಡಿದ ಮನವಿಯನ್ನು ನ್ಯಾಯಮೂರ್ತಿ ಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರ ಪೀಠವು ತಿರಸ್ಕರಿಸಿತು. ‘ನಿಮ್ಮ ಮನವಿಯನ್ನು ನಾವು ಪುರಸ್ಕರಿಸುವುದಿಲ್ಲ. ನೀವು ಬೇಕಾದರೆ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ನ ಮೊರೆ ಹೋಗಬಹುದು’ ಎಂದು ಹೇಳಿತು.

‘ಮುಖ್ಯಮಂತ್ರಿಯೊಬ್ಬರು ಹೇಳಿಕೆ ನೀಡಿದ್ದಾರೆ ಎಂಬ ಕಾರಣಕ್ಕೆ ನಾವು ನಮ್ಮ ತೀರ್ಪನ್ನು ಬದಲಿಸಬೇಕೆ?’ ಎಂದು ವಕೀಲರನ್ನು ಪೀಠ ಕೇಳಿತು.

‘ಆಕ್ರಮಣಕಾರಿ ನಾಯಿಗಳನ್ನು ಕೊಲ್ಲಬಹುದು’ ಎಂದು ಮೇ 19ರ ತನ್ನ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್ ಹೇಳಿತ್ತು. ‘ಸುಪ್ರೀಂ ಕೋರ್ಟ್ನ ತೀರ್ಪನ್ನು ಅನುಸರಿಸಿ, ಅಪಾಯಕಾರಿ ಬೀದಿ ನಾಯಿಗಳನ್ನು ಕೊಲ್ಲಲು ಪಂಜಾಬ್ ಸರ್ಕಾರ ಬೃಹತ್ ಅಭಿಯಾನ ಪ್ರಾರಂಭಿಸಲಿದೆ. ಸುಪ್ರೀಂ ಕೋರ್ಟ್ಗೆ ಧನ್ಯವಾದಗಳು’ ಎಂದು ಮಾನ್ ಕಳೆದ ವಾರ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-51-1637264315

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.