ನವದೆಹಲಿ: ಶಿಕ್ಷೆ ಪೂರ್ಣಗೊಂಡ ನಂತರವೂ ಜೈಲಿನಲ್ಲಿ ಕೊಳೆಯುತ್ತಿರುವ ಕೈದಿಗಳ ಬಗ್ಗೆ ಸುಪ್ರೀಂ ಕೋರ್ಟ್ ಮಂಗಳವಾರ ಕಳವಳ ವ್ಯಕ್ತಪಡಿಸಿದ್ದು, ಬೇರೆ ಯಾವುದೇ ಪ್ರಕರಣದಲ್ಲಿ ಅಗತ್ಯವಿಲ್ಲದಿದ್ದರೆ ಅಂತಹ ಕೈದಿಯನ್ನು ತಕ್ಷಣ ಬಿಡುಗಡೆ ಮಾಡುವಂತೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡಿದೆ.

2002ರ ನಿತೀಶ್ ಕಟಾರಾ ಕೊಲೆ ಪ್ರಕರಣದಲ್ಲಿ ಸುಖದೇವ್ ಯಾದವ್ ಅಲಿಯಾಸ್ ಪೆಹಲ್ವಾನ್ ಅವರನ್ನು ಬಿಡುಗಡೆ ಮಾಡಲು ಆದೇಶಿಸುವಾಗ ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಮತ್ತು ಕೆ.ವಿ. ವಿಶ್ವನಾಥನ್ ಅವರ ಪೀಠವು ಈ ನಿರ್ದೇಶನ ನೀಡಿದೆ. ಈ ವರ್ಷದ ಮಾರ್ಚ್ಗೆ ಯಾದವ್ ಅವರ 20 ವರ್ಷಗಳ ಶಿಕ್ಷೆ ಪೂರ್ಣಗೊಂಡಿದೆ ಎಂದು ಅದು ಗಮನಿಸಿದೆ.

ಯಾವುದೇ ಆರೋಪಿ ಅಥವಾ ಅಪರಾಧಿ ಶಿಕ್ಷೆಯ ಅವಧಿಯನ್ನು ಮೀರಿ ಜೈಲಿನಲ್ಲಿ ಉಳಿದಿದ್ದಾರೆಯೇ ಎಂದು ಖಚಿತಪಡಿಸಿಕೊಳ್ಳಲು ಈ ಆದೇಶದ ಪ್ರತಿಯನ್ನು ರಿಜಿಸ್ಟ್ರಿ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಗೃಹ ಕಾರ್ಯದರ್ಶಿಗಳಿಗೆ ಕಳುಹಿಸಬೇಕು ಎಂದು ಪೀಠ ಹೇಳಿದೆ.

ತಮ್ಮ ಶಿಕ್ಷೆ ಅವಧಿ ಮುಗಿದ ಕೂಡಲೇ ಯಾದವ್ ಬಿಡುಗಡೆ ಆಗಬೇಕಿತ್ತು ಎಂದು ಪೀಠ ಹೇಳಿದೆ.

ಯಾದವ್ 20 ವರ್ಷಗಳ ಸೆರೆವಾಸ ಅನುಭವಿಸಿರುವುದನ್ನು ಗಮನದಲ್ಲಿಟ್ಟುಕೊಂಡು ಸುಪ್ರೀಂ ಕೋರ್ಟ್ ಈ ಹಿಂದೆ ಅವರಿಗೆ 3 ತಿಂಗಳ ಫರ್ಲೊ ನೀಡಿತ್ತು.

ಫರ್ಲೊ ಎಂಬುದು ಜೈಲಿನಿಂದ ತಾತ್ಕಾಲಿಕ ಬಿಡುಗಡೆಯಾಗಿದೆ. ಸಂಪೂರ್ಣ ಶಿಕ್ಷೆಯ ಅಮಾನತು ಅಥವಾ ವಿನಾಯಿತಿ ಅಲ್ಲ.ಸಾಮಾನ್ಯವಾಗಿ ದೀರ್ಘಾವಧಿಯ ಜೈಲು ಶಿಕ್ಷೆ ಅನುಭವಿಸಿದವರಿಗೆ ನೀಡಲಾಗುತ್ತದೆ.

ಮೂರು ವಾರಗಳ ಕಾಲ ಫರ್ಲೋ ಮೇಲೆ ಬಿಡುಗಡೆ ಮಾಡುವಂತೆ ಕೋರಿದ್ದ ತಮ್ಮ ಮನವಿಯನ್ನು ರದ್ದು ಮಾಡಿದ್ದ ದೆಹಲಿ ಹೈಕೋರ್ಟ್ನ 2024 ನವೆಂಬರ್ ತಿಂಗಳ ಆದೇಶವನ್ನು ಪ್ರಶ್ನಿಸಿ ಯಾದವ್ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.