ಗುರುವಾರ, 30 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

EVM ಹಾಗೂ VVಪ್ಯಾಟ್‌ ಮತಗಳ ತಾಳೆ ವಿವಾದ: ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

Published 24 ಏಪ್ರಿಲ್ 2024, 10:03 IST
Last Updated 24 ಏಪ್ರಿಲ್ 2024, 10:03 IST
ಅಕ್ಷರ ಗಾತ್ರ

ನವದೆಹಲಿ: ಇವಿಎಂ ಹಾಗೂ ವಿವಿಪ್ಯಾಟ್‌ನಲ್ಲಿ ದಾಖಲಾಗಿರುವ ಮತಗಳನ್ನು ಶೇ 100ರಷ್ಟು ತಾಳೆ ಹಾಕಬೇಕು ಎಂದು ಕೋರಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ ತೀರ್ಪು ಕಾಯ್ದಿರಿಸಿದೆ.

ಈ ಬಗ್ಗೆ ಎಎನ್‌ಐ ಸುದ್ದಿ ಸಂಸ್ಥೆ ಎಕ್ಸ್‌ನಲ್ಲಿ ಮಾಹಿತಿ ನೀಡಿದೆ.

‘ನಾವು ಚುನಾವಣೆ ಹಾಗೂ ಇನ್ನೊಂದು ಸಾಂವಿಧಾನಿಕ ಸಂಸ್ಥೆ (ಚುನಾವಣಾ ಆಯೋಗ)ಯನ್ನು ನಿಯಂತ್ರಿಸಲು ಆಗುವುದಿಲ್ಲ ಎಂದು ಸುಪ್ರೀಂ ಕೋರ್ಟ್‌ ಇದೇ ವೇಳೆ ಹೇಳಿತು.

ಇದಕ್ಕೂ ಮೊದಲು ಹಲವು ಗೊಂದಲಗಳಿಗೆ ಸ್ಪಷ್ಟೀಕರಣ ಕೇಳಲು ಚುನಾವಣಾ ಆಯೋಗದ ಅಧಿಕಾರಿಯೊಬ್ಬರು ಹಾಜರಿರಬೇಕು ಎಂದು ಸುಪ್ರೀಂ ಕೋರ್ಟ್ ಸೂಚಿಸಿತ್ತು.

ಹೆಚ್ಚಿನ ಮಾಹಿತಿ ನಿರೀಕ್ಷಿಸಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT