ನವದೆಹಲಿ: ಧನಬಾದ್ ಜಿಲ್ಲಾ ಸೆಷನ್ಸ್ ನ್ಯಾಯಾಧೀಶ ಉತ್ತಮ್ ಆನಂದ್ ಹತ್ಯೆ ಬಗ್ಗೆ ಒಂದು ವಾರದೊಳಗೆ ವಸ್ತುಸ್ಥಿತಿಯ ವರದಿ ಸಲ್ಲಿಸುವಂತೆ ಜಾರ್ಖಂಡ್ ಮುಖ್ಯ ಕಾರ್ಯದರ್ಶಿ ಮತ್ತು ಡಿಜಿಪಿಗೆ ಸುಪ್ರೀಂಕೋರ್ಟ್ ಶುಕ್ರವಾರ ಸೂಚನೆ ನೀಡಿದೆ.

‘ಈ ಪ್ರಕರಣದ ತನಿಖೆಯ ಮೇಲುಸ್ತುವಾರಿಯನ್ನುಜಾರ್ಖಂಡ್ ಹೈಕೋರ್ಟ್ ವಹಿಸಲಿದೆ. ದೇಶದಾದ್ಯಂತ ನ್ಯಾಯಾಂಗ ಅಧಿಕಾರಿಗಳ ಮೇಲೆ ದಾಳಿಗಳು ಹೆಚ್ಚಾಗುತ್ತಿವೆ ಎಂಬುದನ್ನು ಪೀಠ ಗಮನಿಸಿದೆ. ಈ ಪ್ರಕರಣದ ಬಗ್ಗೆ ವಿಸ್ತೃತ ಪರಿಶೀಲನೆಯ ಅಗತ್ಯವಿದೆ ಎಂದು ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ನೇತೃತ್ವದ ಪೀಠವು ಹೇಳಿದೆ.

‘ಹತ್ಯೆ ಹಿನ್ನೆಲೆಯಲ್ಲಿ ಎಲ್ಲ ರಾಜ್ಯಗಳಿಗೂ ನೋಟಿಸ್ ನೀಡಲಾಗಿದೆ. ಮುಂದಿನ ವಿಚಾರಣೆ ವೇಳೆಜಾರ್ಖಂಡ್‌ನ ಅಡ್ವೊಕೇಟ್ ಜನರಲ್ ಅವರು ನ್ಯಾಯಾಲಯದಲ್ಲಿ ಹಾಜರಿರಬೇಕು ಎಂದು ಪೀಠ ಹೇಳಿದೆ.

ಉತ್ತಮ್ ಆನಂದ್ ಅವರು ಬುಧವಾರ ಜಡ್ಜಸ್ ಕಾಲೊನಿ ಬಳಿ ವಾಯುವಿಹಾರಕ್ಕೆ ತೆರಳಿದ್ದಾಗ ವಾಹನ ಗುದ್ದಿಸಿ ಹತ್ಯೆ ಮಾಡಲಾಗಿತ್ತು.

ಇದನ್ನೂ ಓದಿ... ಗ್ಯಾಂಗ್ಸ್ಟರ್ಗೆ ಜಾಮೀನು ನೀಡದ್ದಕ್ಕೆ ವಾಹನ ಗುದ್ದಿಸಿ ನ್ಯಾಯಾಧೀಶರ ಹತ್ಯೆ!

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.